ಅಪ್ಪು ಅಗಲಿ 9 ತಿಂಗಳು; ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ಕುಟುಂಬಸ್ಥರು

puneeth rajkumar
  • ಪುನೀತ್‌ ರಾಜ್‌ಕುಮಾರ್‌ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ಅಶ್ವಿನಿ
  • ರಾಘವೇಂದ್ರ ರಾಜ್‌ಕುಮಾರ್‌ ಸೇರಿದಂತೆ ಕುಟುಂಬಸ್ಥರು ಭಾಗಿ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ ನಮ್ಮನ್ನಗಲಿ ಜುಲೈ 29ಕ್ಕೆ ಒಂಭತ್ತು ತಿಂಗಳು ಕಳೆದಿವೆ. ಪುನೀತ್ ಅಗಲಿಕೆಗೆ ವರ್ಷ ತುಂಬುತ್ತಾ ಬಂದರೂ ಅವರ ಅಗಲಿಕೆಯ ನೋವು ಮಾತ್ರ ಅಭಿಮಾನಿಗಳ ಮನಸ್ಸಿನಿಂದ ದೂರವಾಗಿಲ್ಲ. ಪುನೀತ್ ಸಾವನ್ನಪ್ಪಿ ಒಂಭತ್ತು ತಿಂಗಳು ಕಳೆದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

ಇಂದು ಬೆಳಗ್ಗೆ ಮಕ್ಕಳ ಜೊತೆಗೆ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದ ಅಶ್ವಿನಿ, ತಮ್ಮ ಪತಿಯ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಪುನೀತ್ ಅವರ ಸಹೋದರ, ನಟ ರಾಘವೇಂದ್ರ ರಾಜ್‌ಕುಮಾರ್‌ ಮತ್ತು ಕುಟುಂಬಸ್ಥರು ಕೂಡ ಉಪಸ್ಥಿತರಿದ್ದರು. ಜೊತೆಗೆ  ಪುನೀತ್ ಅಭಿಮಾನಿಗಳು ಕೂಡ ನೂರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

ಈ ಸುದ್ದಿ ಓದಿದ್ದೀರಾ? ಸಿನಿ ಶುಕ್ರವಾರ | ವಿಕ್ರಾಂತ್‌ ರೋಣ ಸೇರಿ ಮೂರು ಸಿನಿಮಾಗಳು ತೆರೆಗೆ

ಕಳೆದ ವರ್ಷ ಅಕ್ಟೋಬರ್‌ 29ರಂದು ಪುನೀತ್‌ ರಾಜ್‌ಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದರು. ಪುನೀತ್‌ ಸಾವಿಗೂ ಮುನ್ನ ಪ್ರಮುಖ ಪಾತ್ರದಲ್ಲಿ ನಟಿಸಿದ್ದ 'ಲಕ್ಕಿಮ್ಯಾನ್‌' ಸಿನಿಮಾ ಆಗಸ್ಟ್‌ನಲ್ಲಿ ತೆರೆಕಾಣಲಿದೆ. ಅವರ ಕನಸಿನ ಸಾಕ್ಷ್ಯಚಿತ್ರ 'ಗಂಧದಗುಡಿ' ಕೂಡ ಅಕ್ಟೋಬರ್‌ನಲ್ಲಿ ತೆರೆಗೆ ಬರಲಿದೆ.   

ನಿಮಗೆ ಏನು ಅನ್ನಿಸ್ತು?
0 ವೋಟ್