ತಮಿಳು ನಟ ವಿಕ್ರಮ್‌ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

Chiyaan_Vikram
  • ಜ್ವರದಿಂದ ಆಸ್ಪತ್ರೆ ಸೇರಿದ ವಿಕ್ರಮ್‌
  • ಹೃದಯಾಘಾತ ಎಂದ ಮಾಧ್ಯಮಗಳು

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್‌ ವಿಕ್ರಮ್‌ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸದ್ಯ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗುರುವಾರ ಸಂಜೆ ವಿಕ್ರಮ್‌ ಅವರಿಗೆ ವಿಪರೀತ ಜ್ವರ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿತಿ ಈಗ ಸುಧಾರಿಸಿರುವುದಾಗಿ ದಕ್ಷಿಣದ ಖ್ಯಾತ ಸಿನಿಮಾ ವಿಮರ್ಶಕ ರಮೇಶ್‌ ಬಾಲ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.  

 

 

ಆದರೆ, ಬಹುತೇಕ ರಾಷ್ಟ್ರೀಯ ಸ್ಥಳೀಯ ಮಾಧ್ಯಮಗಳು ವಿಕ್ರಮ್‌ ಅವರಿಗೆ ಹೃದಯಾಘಾತವಾಗಿದೆ ಎಂದು ವರದಿ ಮಾಡಿವೆ.  

ತಮಿಳಿನ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಪೊನ್ನಿನ್‌ ಸೆಲ್ವನ್‌ ಚಿತ್ರದಲ್ಲಿ ವಿಕ್ರಮ್‌ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಇಂದು ಸಂಜೆ ಅದ್ದೂರಿ ಸಮಾರಂಭದಲ್ಲಿ ಚಿತ್ರದ ಟೀಸರ್‌ ಬಿಡುಗಡೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ವಿಕ್ರಮ್‌ ಕೂಡ ಬರಬೇಕಿತ್ತು. ಆದರೆ, ಅನಾರೋಗ್ಯದ ಕಾರಣದಿಂದಾಗಿ ಅವರು ಸಮಾರಂಭಕ್ಕೆ ಗೈರಾಗಲಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್