ನಟ ಕಮಲ ಹಾಸನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

kamal hassan
  • ಜ್ವರದಿಂದ ಬಳಲುತ್ತಿದ್ದ ಕಮಲ್‌ ಹಾಸನ್‌
  • ಆತಂಕ ಪಡುವ ಅಗತ್ಯವಿಲ್ಲ ಎಂದ ವೈದ್ಯರು

ತಮಿಳಿನ ಹಿರಿಯ ನಟ ಕಮಲ್‌ ಹಾಸನ್‌ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ನವೆಂಬರ್‌ 23ರಂದು ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಮಲ್‌ ಹಾಸನ್‌ ಆಸ್ಪತ್ರೆಗೆ ದಾಖಲಾಗಿದ್ದು ನಿಜವಾದರೂ ಅವರ ಆರೋಗ್ಯ ಸ್ಥಿತಿ ಸಹಜವಾಗಿದೆ ಎಂದು ತಮಿಳುನಾಡಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ಕಮಲ್‌ ಹಾಸನ್‌ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಕುಟುಂಬಸ್ಥರು ಅವರನ್ನು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್‌ ಸೆಂಟರ್‌ಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಮಲ್‌ ಹಾಸನ್‌ ಅವರಿಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. 

ಈ ಸುದ್ದಿ ಓದಿದ್ದೀರಾ? ಸಿನಿ ರಸಿಕರ ಗಮನ ಸೆಳೆಯುತ್ತಿದೆ ತಿಮ್ಮಯ್ಯ & ತಿಮ್ಮಯ್ಯ ಟ್ರೈಲರ್‌

ವಿಕ್ರಮ್‌ ಸಿನಿಮಾ ಭರ್ಜರಿ ಯಶಸ್ಸು ಗಳಿಸಿದ ಬಳಿಕ ಕಮಲ್‌ ಹಾಸನ್‌ ತಮಿಳು ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ವೈದ್ಯರು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿರುವ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಬಳಿಕ ಅವರು ಬಿಗ್‌ ಬಾಸ್‌ ವಾರಾಂತ್ಯದ ಕಾರ್ಯಕ್ರಮಕ್ಕೆ ಗೈರಾಗುವ ಸಾಧ್ಯತೆ ಇದೆ.

AV Eye Hospital ad
ನಿಮಗೆ ಏನು ಅನ್ನಿಸ್ತು?
0 ವೋಟ್
eedina app