ಮೊದಲ ಹಂತದ ಚಿತ್ರೀಕರಣ ಮುಗಿಸಿದ 'ಲವ್‌‌ ಲಿ'

Love li
  • 'ಲವ್‌‌ ಲಿ'ಯಲ್ಲಿ ಲವರ್ ಬಾಯ್ ಆಗಿ ಮಿಂಚಲಿರುವ ವಸಿಷ್ಠ ಸಿಂಹ
  • ಎರಡನೇ ಹಂತದ ಶೂಟಿಂಗ್‌‌ನಲ್ಲಿ ಚಿತ್ರತಂಡ ಬ್ಯುಸಿ

ಸ್ಯಾಂಡಲ್‌‌ವುಡ್‌‌ನಲ್ಲಿ ಖಳನ ಪಾತ್ರಗಳ ಮೂಲಕ ಜನಪ್ರಿಯತೆ ಗಳಿಸಿರುವ ನಟ ವಸಿಷ್ಠ ಸಿಂಹ ಮುಖ್ಯಭೂಮಿಕೆ ನಿಭಾಯಿಸಿರುವ ಬಹು ನಿರೀಕ್ಷಿತ 'ಲವ್ ಲಿ' ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಇತ್ತೀಚೆಗೆ ಬಿಡುಗಡೆಯಾಗಿದ್ದ ವಸಿಷ್ಠ ಅವರ ಫಸ್ಟ್‌‌ಲುಕ್ ಸಿನಿ ರಸಿಕರ ಮೆಚ್ಚುಗೆ ಗಳಿಸಿತ್ತು. ಇದೀಗ ಚಿತ್ರತಂಡ ಹೊಸ ಮಾಹಿತಿಯನ್ನು ಹಂಚಿಕೊಂಡಿದೆ.

'ಲವ್ ಲಿ' ಸಿನಿಮಾದ ಮೊದಲ ಹಂತದ ಚಿತ್ರೀಕರಣವನ್ನು ಇತ್ತೀಚೆಗೆ ಯಶಸ್ವಿಯಾಗಿ ಮುಗಿಸಿರುವ ಚಿತ್ರತಂಡ ಬೆಂಗಳೂರಿನ ನಾಗರಭಾವಿಯಲ್ಲಿರುವ 'ಕಿಂಗ್ಸ್ ಕ್ಲಬ್' ನಲ್ಲಿ ಎರಡನೇ ಹಂತದ ಚಿತ್ರೀಕರಣ ನಡೆಸುತ್ತಿದೆ. ಕ್ಲಬ್‌‌ನಲ್ಲಿ ಆಫೀಸ್ ಸೆಟ್ ನಿರ್ಮಾಣ ಮಾಡಲಾಗಿದ್ದು, ವಸಿಷ್ಠ ಸಿಂಹ, ಸಾಧುಕೋಕಿಲ, ಸಮೀಕ್ಷಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

Image
Love li

‘ಲವ್ ಲಿ’ ಚಿತ್ರಕ್ಕೆ ಚೇತನ್ ಕೇಶವ್ ನಿರ್ದೇಶನವಿದೆ. ಇದೊಂದು ರೋಮ್ಯಾಂಟಿಕ್ ಲವ್ ಸ್ಟೋರಿಯಾಗಿದ್ದು, ರೌಡಿಸಂ ಎಳೆಯನ್ನೂ ಹೊಂದಿದೆ. ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್, ವಸಿಷ್ಠ ಸಿಂಹ ಅವರಿಗೆ ಜೊತೆಯಾಗಿದ್ದಾರೆ. ವಿಶೇಷ ಎಂದರೆ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಕೂಡ 'ಲವ್ ಲಿ' ಚಿತ್ರತಂಡ ಸೇರಿಕೊಂಡಿದ್ದಾರೆ.

ಚಿತ್ರಕ್ಕೆ ಎಂ.ಆರ್ ರವೀಂದ್ರ ಕುಮಾರ್ ಬಂಡವಾಳ ಹೂಡಿದ್ದು, ಅನೂಪ್ ಸೀಳಿನ್ ಸಂಗೀತ ಸಂಯೋಜನೆಯ ಹೊಣೆ ಹೊತ್ತುಕೊಂಡಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್