ಕೋವಿಡ್‌ ಸುದ್ದಿ | ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೊರೊನಾ ಮಾರ್ಗಸೂಚಿ ಪಾಲಿಸಲು ಕೇಂದ್ರ ಸರ್ಕಾರದ ಸೂಚನೆ

Covid 19

ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಸೇರುವ ಜನಸಂದಣಿ ಮೇಲೆ ನಿಗಾ ವಹಿಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಸೂಚಿಸಿದೆ. ಜನ ಸೇರುವ ಸ್ಥಳಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್‌ ಹಾಗೂ ಕೈಗಳ ಸ್ವಚ್ಚತೆಯ ಬಗ್ಗೆ ಗಮನ ಹರಿಸಲು ತಿಳಿಸಲಾಗಿದೆ.

ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಎರಡು ಸಾವಿರದ ಗಡಿ ದಾಟಿದ್ದು, ಕಳೆದ ಒಂದು ದಿನದ ಅವಧಿಯಲ್ಲಿ (ಆಗಸ್ಟ್ 12) ಸೋಂಕಿನಿಂದಾಗಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಧಾರವಾಡ, ಕೊಪ್ಪಳ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಬ್ಬರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಈ ಐದು ಸಾವಿನ ಪ್ರಕರಣದೊಂದಿಗೆ ರಾಜ್ಯದಲ್ಲಿ ಕೋವಿಡ್-19ರಿಂದ ಪ್ರಾಣ ಬಿಟ್ಟವರ ಒಟ್ಟು ಸಂಖ್ಯೆ 40,139ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಪತ್ತೆಯಾದ ಸೋಂಕಿನ ಪ್ರಕರಣಗಳ ಸಂಖ್ಯೆ 2,032. ಸಕ್ರಿಯ ಪ್ರಕರಣಗಳು 10,395. ಇನ್ನು, ಸೋಂಕಿನಿಂದ ಗುಣಮುಖರಾದವರು 1,686 ಮಂದಿ.

ದೇಶಾದ್ಯಂತ ಕಳೆದೊಂದು ದಿನದಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆ 15,815. ಸೋಂಕಿಗೆ ಬಲಿಯಾದವರು 68 ಮಂದಿ. ಒಟ್ಟು ಸಕ್ರಿಯ ಪ್ರಕರಣಗಳು 1,19264. ಸೋಂಕಿನಿಂದ ಮುಕ್ತರಾದವರು 20,018 ಮಂದಿ. ಧನಾತ್ಮಕ ಪ್ರಕರಣಗಳ ಏರಿಕೆ ಪ್ರಮಾಣ ಶೇಕಡ 4.9.

ವಿಶ್ವಾದ್ಯಂತ ಕಳೆದ 24 ಗಂಟೆಯ ಅವಧಿಯಲ್ಲಿ ದಾಖಲಾಗಿರುವ ಸೋಂಕಿನ ಪ್ರಕರಣಗಳು 7,92,177. ಮೃತಪಟ್ಟವರು 2,233 ಮಂದಿ. ಸೋಂಕಿನಿಂದ ಹೊರಬಂದವರು 8,12,248. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 21,439,500.

ನಿಮಗೆ ಏನು ಅನ್ನಿಸ್ತು?
0 ವೋಟ್