ಕೋವಿಡ್‌ ಸುದ್ದಿ | ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಇಳಿಮುಖ; ವಿಶ್ವಾದ್ಯಂತ ಸಾವಿನ ಸಂಖ್ಯೆ ಏರಿಕೆ

Covid 19

ರಾಜ್ಯದಲ್ಲಿ ಕಳೆದೊಂದು ದಿನದಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 1,206. ಕಳೆದ 24 ಗಂಟೆಯಲ್ಲಿ ಸೋಂಕಿನಿಂದ ಮೃತಪಟ್ಟ ಯಾವುದೇ ಪ್ರಕರಣ ದಾಖಲಾಗಿಲ್ಲ. ಸಕ್ರಿಯ ಪ್ರಕರಣಗಳು 10,475. ಸೋಂಕಿನಿಂದ ಗುಣಮುಖರಾದವರು 1,653 ಮಂದಿ. ಪ್ರಕರಣಗಳ ಏರಿಕೆ ಪ್ರಮಾಣ ಶೇಕಡ 9.62.

ದೇಶಾದ್ಯಂತ ಕಳೆದ ಒಂದು ದಿನದಲ್ಲಿ (ಆಗಸ್ಟ್ 16, ಬೆಳಗ್ಗೆ 10 ಗಂಟೆವರೆಗೆ) ಪತ್ತೆಯಾದ ಪ್ರಕರಣಗಳ ಸಂಖ್ಯೆ 23,730. ಸೋಂಕಿಗೆ ಬಲಿಯಾದವರು 61 ಮಂದಿ. ಒಟ್ಟು ಸಕ್ರಿಯ ಪ್ರಕರಣಗಳು 1,11,252. ಸೋಂಕಿನಿಂದ ಮುಕ್ತರಾದವರು 15,040 ಮಂದಿ. ಪ್ರಕರಣಗಳ ಏರಿಕೆ ಪ್ರಮಾಣ ಶೇಕಡ 3.8.

ವಿಶ್ವಾದ್ಯಂತ ಕಳೆದ 24 ಗಂಟೆಯ ಅವಧಿಯಲ್ಲಿ ದಾಖಲಾಗಿರುವ ಸೋಂಕಿನ ಪ್ರಕರಣಗಳು 5,06,717. ಕೊರೊನಾದಿಂದ ಮೃತಪಟ್ಟವರು 1,325 ಮಂದಿ. ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 9,57,522. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,97,19,542. ಅಮೆರಿಕದಲ್ಲಿ ಕಳೆದೊಂದು ದಿನದಲ್ಲಿ ದಾಖಲಾದ ಸೋಂಕಿತರ ಸಂಖ್ಯೆ 37,565; ಪ್ರಾಣ ಬಿಟ್ಟವರು 112 ಮಂದಿ. ಫ್ರಾನ್ಸ್‌ನಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 4,564; ಪ್ರಾಣ ಕಳೆದುಕೊಂಡವರು 65. ಬ್ರೆಜಿಲ್‌ನಲ್ಲಿ ಪತ್ತೆಯಾದ ಪ್ರಕರಣಗಳು 6,596; 155 ಮಂದಿ ಸಾವು. ಜರ್ಮನಿಯಲ್ಲಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ 63,742; ಕೋವಿಡ್‌-19ಕ್ಕೆ ಬಲಿಯಾದವರು 140 ಮಂದಿ.

ಸುದ್ದಿ ಮೂಲ: ಬಿಬಿಎಂಪಿ, ಕೇಂದ್ರ ಆರೋಗ್ಯ ಸಚಿವಾಲಯ, ವಿಶ್ವ ಆರೋಗ್ಯ ಸಂಸ್ಥೆ
ನಿಮಗೆ ಏನು ಅನ್ನಿಸ್ತು?
0 ವೋಟ್