ಕೋವಿಡ್‌ ಸುದ್ದಿ | ಸೋಂಕಿಗೆ ರಾಜ್ಯದಲ್ಲಿ ಐವರು ಬಲಿ, ದೇಶಾದ್ಯಂತ 36 ಮಂದಿ ಸಾವು

Covid 19

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ. ಬೆಂಗಳೂರು ನಗರ, ಕೋಲಾರ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ ಒಬ್ಬರು ಹಾಗೂ ಧಾರವಾಡ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 40,152ಕ್ಕೇರಿದೆ. ಕಳೆದ ಒಂದು ದಿನದಲ್ಲಿ ಪತ್ತೆಯಾದ ಕೋವಿಡ್-19 ಪ್ರಕರಣಗಳ ಸಂಖ್ಯೆ 1,121. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9,880. ಸೋಂಕಿನಿಂದ ಗುಣಮುಖರಾದವರು 1,711 ಮಂದಿ. ಪ್ರಕರಣಗಳ ಏರಿಕೆ ಪ್ರಮಾಣ ಶೇಕಡ 7.59.

ಇನ್ನು, ದೇಶಾದ್ಯಂತ ಕಳೆದೊಂದು ದಿನದಲ್ಲಿ ಪತ್ತೆಯಾದ ಸೋಂಕಿನ ಪ್ರಕರಣಗಳ ಸಂಖ್ಯೆ 9,062. ಸೋಂಕಿಗೆ ಬಲಿಯಾದವರು 36 ಮಂದಿ. ಒಟ್ಟು ಸಕ್ರಿಯ ಪ್ರಕರಣಗಳು 1,05,058. ಸೋಂಕಿನಿಂದ ಮುಕ್ತರಾದವರು 15,220 ಮಂದಿ. ಪ್ರಕರಣಗಳ ಏರಿಕೆ ಪ್ರಮಾಣ ಶೇಕಡ 4.4.

ವಿಶ್ವಾದ್ಯಂತ ಕಳೆದ 24 ಗಂಟೆಯ ಅವಧಿಯಲ್ಲಿ ದಾಖಲಾಗಿರುವ ಸೋಂಕಿನ ಪ್ರಕರಣಗಳು 588,889. ಕೊರೊನಾದಿಂದ ಮೃತಪಟ್ಟವರು 1,744 ಮಂದಿ. ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 9,57,522. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 10,24,688. ಅಮೆರಿಕದಲ್ಲಿ ಕಳೆದೊಂದು ದಿನದಲ್ಲಿ ದಾಖಲಾದ ಸೋಂಕಿತರ ಸಂಖ್ಯೆ 37,565; ಪ್ರಾಣ ಬಿಟ್ಟವರು 262 ಮಂದಿ. ಫ್ರಾನ್ಸ್‌ನಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 6,331; ಬಲಿಯಾದವರು 113. ಬ್ರೆಜಿಲ್‌ನಲ್ಲಿ ಪತ್ತೆಯಾದ ಪ್ರಕರಣಗಳು 23,040; 123 ಮಂದಿ ಸಾವು. ಜರ್ಮನಿಯಲ್ಲಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ 67,390; ಕೋವಿಡ್-19ಕ್ಕೆ ಬಲಿಯಾದವರು 192 ಮಂದಿ.

ಸುದ್ದಿ ಮೂಲ: ಬಿಬಿಎಂಪಿ, ಕೇಂದ್ರ ಆರೋಗ್ಯ ಸಚಿವಾಲಯ, ವಿಶ್ವ ಆರೋಗ್ಯ ಸಂಸ್ಥೆ
ನಿಮಗೆ ಏನು ಅನ್ನಿಸ್ತು?
0 ವೋಟ್