ಕೋವಿಡ್ ಸುದ್ದಿ | ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಳಿಮುಖ, ಇಬ್ಬರು ಸಾವು

Face Mask

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ ಪತ್ತೆಯಾದ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ 659. ಬೆಂಗಳೂರು ನಗರ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 40,194. ಒಟ್ಟು ಸಕ್ರಿಯ ಪ್ರಕರಣಗಳು 7,324. ಕೋವಿಡ್‌-19ರ ಸೋಂಕಿನಿಂದ ಗುಣಮುಖರಾದವರು 1,192 ಮಂದಿ. ದೈನಂದಿನ ಪ್ರಕರಣಗಳ ಏರಿಕೆ ಪ್ರಮಾಣ ಶೇಕಡ 5.29.

ರಾಜ್ಯದಲ್ಲಿ ಸಾಲು-ಸಾಲು ಹಬ್ಬಗಳ ಕಾರಣ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಐದು ವರ್ಷ ಮೇಲ್ಪಟ್ಟ ಮಕ್ಕಳಿಗೂ ಮಾಸ್ಕ್ ಕಡ್ಡಾಯ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಇನ್ನು, ದೇಶಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ (ಆಗಸ್ಟ್‌ 29) ಪತ್ತೆಯಾದ ಸೋಂಕಿತರ ಸಂಖ್ಯೆ 7,591. ಕೊರೊನಾಗೆ ಬಲಿಯಾದವರು 45 ಮಂದಿ. ಒಟ್ಟು ಸಾವಿನ ಸಂಖ್ಯೆ 5,27,799. ಸಕ್ರಿಯ ಪ್ರಕರಣಗಳ ಸಂಖ್ಯೆ 9,206. ಸೋಂಕಿನಿಂದ ಮುಕ್ತರಾದವರು 9,206. ಪ್ರಕರಣಗಳ ಏರಿಕೆ ಪ್ರಮಾಣ ಶೇಕಡ 2.8.

ವಿಶ್ವಾದ್ಯಂತ ಕಳೆದೊಂದು ದಿನದಲ್ಲಿ ದಾಖಲಾದ ಸೋಂಕಿತರ ಸಂಖ್ಯೆ 4,41,034. ಸಾವಿನ ಸಂಖ್ಯೆ 1,358. ಸೋಂಕಿನಿಂದ 8,34,748 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,78,97,955.

ಸುದ್ದಿ ಮೂಲ: ಬಿಬಿಎಂಪಿ, ಕೇಂದ್ರ ಆರೋಗ್ಯ ಸಚಿವಾಲಯ
ನಿಮಗೆ ಏನು ಅನ್ನಿಸ್ತು?
1 ವೋಟ್