ಕೋವಿಡ್ ಸುದ್ದಿ | ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಳಿಕೆ, 822 ಮಂದಿ ಗುಣಮುಖ

Covid-19

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 484 ಮಂದಿ ಕೋವಿಡ್‌-19 ಸೋಂಕಿಗೆ ತುತ್ತಾಗಿದ್ದು, ಬಳ್ಳಾರಿ ಮತ್ತು ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 40,207ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,872. ಸೋಂಕಿನಿಂದ ಹೊರಬಂದವರು 822 ಮಂದಿ. ಸಕ್ರಿಯ ಪ್ರಕರಣಗಳ ಏರಿಕೆ ಪ್ರಮಾಣ ಶೇಕಡ 3.75.

ಇನ್ನು, ದೇಶಾದ್ಯಂತ ಪತ್ತೆಯಾದ ಪ್ರಕರಣಗಳು 5,910. ಸೋಂಕಿನಿಂದ ಮೃತಪಟ್ಟವರು 23 ಮಂದಿ (ಸೆಪ್ಟೆಂಬರ್‌ 6ರ ಬೆಳಗ್ಗೆ 8 ಗಂಟೆಯವರೆಗೆ). ಸಕ್ರಿಯ ಪ್ರಕರಣಗಳ ಸಂಖ್ಯೆ 52,336. ಸೋಂಕಿನಿಂದ ಮುಕ್ತರಾದವರು 6,032. ಪ್ರಕರಣಗಳ ಏರಿಕೆ ಪ್ರಮಾಣ ಶೇಕಡ 2.2.

ವಿಶ್ವಾದ್ಯಂತ ಕಳೆದ 24 ಗಂಟೆಯಲ್ಲಿ 3,52,886 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. 1,069 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,61,58,863. ಸೋಂಕಿನಿಂದ ಗುಣಮುಖರಾದವರು 7,91,141 ಮಂದಿ. ಜಪಾನಿನಲ್ಲಿ ದೃಢಪಟ್ಟ ಕೊರೊನಾ ಪ್ರಕರಣಗಳು 1,05,010; ಮೃತಪಟ್ಟವರು 225 ಮಂದಿ. ಅಮೆರಿಕದಲ್ಲಿ ಪತ್ತೆಯಾದ ಸೋಂಕಿತರು 9,480; 13 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಬ್ರೆಜಿಲ್‌ನಲ್ಲಿ 76 ಮಂದಿ ಸಾವನ್ನಪ್ಪಿದ್ದು, 7,668 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಸುದ್ದಿ ಮೂಲ: ಬಿಬಿಎಂಪಿ, ಕೇಂದ್ರ ಆರೋಗ್ಯ ಸಚಿವಾಲಯ, ವಿಶ್ವ ಆರೋಗ್ಯ ಸಂಸ್ಥೆ
ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180