ಪ್ರಕೃತಿ ವಿಕೋಪ-ಕೋಮು ಗಲಭೆ ಸಂತ್ರಸ್ತರಿಗೆ ಸಾಲಸೌಲಭ್ಯದ ‘ಸಾಂತ್ವನ’ ಯೋಜನೆಗೆ ಚಾಲನೆ

Date:

  • ಪ್ರವಾಹ, ಕೋಮು ಗಲಭೆ ಸಂತ್ರಸ್ತ ಕುಟುಂಬಗಳಿಗೆ ನೆರವು 
  • ಸಂತ್ರಸ್ತ ಕುಟುಂಬಗಳಿಗೆ ಐದು ಲಕ್ಷ ರೂ. ವರೆಗೂ ಸಾಲ

ಪ್ರವಾಹ, ಅಗ್ನಿ ದುರಂತ, ಕೋಮು ಗಲಭೆ ಹಾಗೂ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೇರವಾಗಲು ‘ಸಾಂತ್ವನ’ ಯೋಜನೆ ಆರಂಭಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಸಾಂತ್ವನ’ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, “ಪ್ರಕೃತಿ ವಿಕೋಪ ಹಾಗೂ ಕೋಮು ಗಲಭೆಯಲ್ಲಿ ಸಂತ್ರಸ್ತರಾಗಿ ಮನೆ ಹಾಗೂ ಅಂಗಡಿ ಕಳೆದುಕೊಳ್ಳುವ ಕುಟುಂಬಗಳಿಗೆ ಐದು ಲಕ್ಷ ರೂ. ವರೆಗೆ ಸಾಲ ನೀಡುವ ಯೋಜನೆ ಇದಾಗಿದೆ” ಎಂದರು.

“ಐದು ಲಕ್ಷ ರೂ. ಪೈಕಿ ಶೇ.50 ರಷ್ಟು ಅಂದರೆ 2.50 ಲಕ್ಷ ರೂ. ಸಾಲ, ಉಳಿದ 2.50 ಲಕ್ಷ ಸಬ್ಸಿಡಿ ದೊರೆಯಲಿದ್ದು ಸಾಲಕ್ಕೆ ಶೇ.3 ರಷ್ಟು ಬಡ್ಡಿ ವಿಧಿಸಲಾಗುವುದು. ಈ ಮೊತ್ತದಲ್ಲಿ ಸಂತ್ರಸ್ತ ಕುಟುಂಬಗಳು ವ್ಯಾಪಾರ ಅಥವಾ ಇತರೆ ಉದ್ಯೋಗದಲ್ಲಿ ತೊಡಗಬಹುದು. ಅಲ್ಪಸಂಖ್ಯಾತರ ಸಮುದಾಯದ ಕುಟುಂಬಗಳಿಗೆ ಈ ಯೋಜನೆಯಡಿಯಲ್ಲಿ ನೆರವು ಸಿಗಲಿದೆ. ಇದರಿಂದ ಸಂಕಷ್ಟಕ್ಕೆ ಸಿಲುಕುವ ಕುಟುಂಬಗಳಿಗೆ ನೆರವು ಸಿಗಲಿದೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಹಸಿದ ಹೊಟ್ಟೆಗಳು ಹೇಳುತ್ತಿರುವ ಕುಬೇರರ ಕಥೆ

ಇದೇ ಸಂದರ್ಭದಲ್ಲಿ ಯೋಜನಾ ಸಚಿವ ಡಿ. ಸುಧಾಕರ್ ಅವರೊಂದಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯೋಜನೆಗಳ ಅನುಷ್ಠಾನ ಕುರಿತು ಚರ್ಚಿಸಿದರು. ಯೋಜನೆ ಇಲಾಖೆ ಸಚಿವ ಡಿ. ಸುಧಾಕರ್ ಅವರೊಂದಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯೋಜನೆಗಳ ಸಂಬಂಧ
ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಗುರುವಾರ
ಕೆಎಂಡಿಸಿ ಸಭಾಂಗಣದಲ್ಲಿ ಸಭೆ ನಡೆಸಿದರು.

ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಗೃಹ ಮಂಡಳಿ ಆಯುಕ್ತ ರಾದ ಕವಿತಾ ಮಣ್ಣಿಕೇರಿ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಎಫ್‌ಐಆರ್

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್...