ಸಮಾಜದ ಸಾಮರಸ್ಯ ಹಾಳು ಮಾಡುವ ಸಂಘಟನೆಗಳನ್ನು ಬೊಮ್ಮಾಯಿ ನಿಷೇಧಿಸಲಿ: ಸಿದ್ದರಾಮಯ್ಯ ಆಗ್ರಹ

Siddaramaiah
  • ಭಗವಾಧ್ವಜ ಹಾರಿಸುತ್ತೇವೆ ಎನ್ನುವವರಿಂದ ದೇಶಪ್ರೇಮದ ಪಾಠ
  • ಗಲಭೆಗೆ ಕಾರಣವಾಗುವ ಸಂಘಟನೆಗಳ ವಿಷಯದಲ್ಲಿ ಯಾಕೆ ಸುಮ್ಮನಿದ್ದೀರಾ?

ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಸೇರಿ ಯಾವುದೇ ಸಂಘಟನೆ ಆಗಲಿ ಸಮಾಜದ ಸಾಮರಸ್ಯ ಹಾಳು ಮಾಡಿ, ಗಲಭೆಗಳಿಗೆ ಕಾರಣವಾಗುತ್ತಿವೆ ಎಂಬುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇದ್ದರೆ ರಾಜ್ಯ ಬಿಜೆಪಿ ಸರ್ಕಾರ ಅಂತಹ ಸಂಘಟನೆಗಳನ್ನು ನಿಷೇಧ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

ಈ ಕುರಿತು ಅವರು ಮಂಗಳವಾರ ಸರಣಿ ಟ್ವೀಟ್‌ ಮಾಡಿ, ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೇ ಸರ್ಕಾರ ಇದೆ. ಆದರೂ ಗಲಭೆಗೆ ಕಾರಣವಾಗುವ ಸಂಘಟನೆಗಳ ವಿಷಯದಲ್ಲಿ ಯಾಕೆ ಸುಮ್ಮನಿದ್ದೀರಾ” ಎಂದು ಪ್ರಶ್ನಿಸಿದ್ದಾರೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರಾವಳಿಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಮಾತ್ರ ಹೋಗಿ ಪರಿಹಾರ ಕೊಟ್ಟಿದ್ದಾರೆ. ಮಸೂದ್ ಮತ್ತು ಫಾಜಿಲ್ ಕುಟುಂಬವನ್ನು ಭೇಟಿಯೂ ಮಾಡಿಲ್ಲ, ಪರಿಹಾರವನ್ನೂ ಘೋಷಿಸಿಲ್ಲ. ಸರ್ಕಾರದ ಬೊಕ್ಕಸದಿಂದ ನೀಡುವ ಪರಿಹಾರದಲ್ಲಿ ಇಂತಹ ತಾರತಮ್ಯ ಯಾಕೆ?” ಎಂದಿದ್ದಾರೆ.

“ರಾಷ್ಟ್ರಧ್ವಜದ ಜಾಗದಲ್ಲಿ ಭಗವಾ ಧ್ವಜ ಹಾರಿಸುತ್ತೇವೆ ಎಂದು ಹೇಳಿದ ಈಶ್ವರಪ್ಪ ಅವರನ್ನು ಇನ್ನೂ ಪಕ್ಷದಲ್ಲಿಟ್ಟುಕೊಂಡ ಬಿಜೆಪಿ ನಾಯಕರು ನಮಗೆ ದೇಶಪ್ರೇಮದ ಪಾಠ ಮಾಡುವುದು ಆತ್ಮವಂಚನೆಯಾಗುತ್ತದೆ” ಎಂದು ಕುಟುಕಿದ್ದಾರೆ.

ನಿಮಗೆ ಏನು ಅನ್ನಿಸ್ತು?
1 ವೋಟ್