ಬಾಣಂತಿ, ಹಸುಗೂಸು ಸಾವು | ಆರೋಗ್ಯ ಸಚಿವ ಸುಧಾಕರ್‌ ತಕ್ಷಣ ರಾಜೀನಾಮೆ ನೀಡಲಿ : ಸಿದ್ದರಾಮಯ್ಯ ಆಗ್ರಹ

siddaramaih
  • ʼ#ಸರ್ಕಾರಿಕೊಲೆಗಳುʼ ಹ್ಯಾಶ್‌ಟ್ಯಾಗ್‌ನಡಿ ಸರಣಿ ಟ್ವೀಟ್‌ ಮಾಡಿದ ಸಿದ್ದರಾಮಯ್ಯ
  • ʼಸಚಿವರಾಗಿ ಸುಧಾಕರ್‌ ಮುಂದುವರಿದರೆ ವೈದ್ಯಕೀಯ ಹತ್ಯೆಗಳಿಗೆ ಕೊನೆಯಿಲ್ಲʼ

ತುಮಕೂರು ಜಿಲ್ಲೆಯ ವೈದ್ಯರ ನಿರ್ಲಕ್ಷದಿಂದಾಗಿ ನಡೆದ ಬಾಣಂತಿ ಮತ್ತು ಎರಡು ಹಸುಗೂಸುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಅವರು ತಕ್ಷಣ ರಾಜೀನಾಮೆ ನೀಡಬೇಕು. ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಇಡೀ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ʼ#ಸರ್ಕಾರಿಕೊಲೆಗಳುʼ ಹ್ಯಾಶ್‌ಟ್ಯಾಗ್‌ನಡಿ ಸರಣಿ ಟ್ವೀಟ್‌ ಮಾಡಿರುವ ಅವರು, “ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಡಾ. ಕೆ ಸುಧಾಕರ್‌ ಅವರು ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ” ಎಂದು ಎಚ್ಚರಿಸಿದ್ದಾರೆ.

Eedina App

“ಗುಂಡಿಬಿದ್ದ ರಸ್ತೆಗಳಲ್ಲಿ ಜನ ಬಿದ್ದು ಸಾಯುತ್ತಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದವರೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 40% ಕಮಿಷನ್ ನೀಡಲಿಕ್ಕಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿದ್ದಾರೆ. ಬಿಜೆಪಿ ಸರ್ಕಾರ ಜನರನ್ನು ಸಾಯಿಸುವ ಸರ್ಕಾರವೇ ಹೊರತು ಬದುಕಿಸುವ ಸರ್ಕಾರ ಅಲ್ಲ” ಎಂದು ಹರಿಹಾಯ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಸರ್ಕಾರಿ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ-ನವಜಾತ ಅವಳಿ ಶಿಶು ಸಾವು; ಹೆಣ್ಣು ಮಗು ಅನಾಥ!

AV Eye Hospital ad

“ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಕರ್ತವ್ಯಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ ಬಿಜೆಪಿ ಸರ್ಕಾರದ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ” ಎಂದು ಟೀಕಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app