ಮಳೆಗಾಲದ ಅಧಿವೇಶನ | ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲು ಸಿಎಂ ತೀರ್ಮಾನ; ಎಸ್‌ ಟಿ ಸೋಮಶೇಖರ್‌

  • ಯಶಸ್ವಿನಿ ಯೋಜನೆಯ ಸೌಲಭ್ಯ ಎಲ್ಲ ರೈತರಿಗೂ ಅನ್ವಯ ಆಗಲ್ಲ!
  • ರೈತರಿಗೆ 0% ಕಡಿಮೆ ಬಡ್ಡಿ ದರದಲ್ಲಿ ಕೃಷಿ ಸಾಲ ಸೌಲಭ್ಯ: ಸೋಮಶೇಖರ್‌

ಸಹಕಾರ ಸಂಸ್ಥೆಗಳು ವ್ಯವಸ್ಥಿತವಾಗಿ ನಡೆಯುತ್ತಿದ್ದು, 24.33 ಲಕ್ಷ ರೈತರಿಗೆ 0%ನಲ್ಲಿ ಸಾಲ ಕೊಡಬೇಕು ಎಂದು ಬಜೆಟ್‌ನಲ್ಲಿ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಅದರಂತೆ ಡಿಸಿಸಿ ಬ್ಯಾಂಕ್‌ಗಳ ಮೂಲಕ ರೈತರಿಗೆ ಸಾಲ ಸೌಲಭ್ಯ ಸಿಗಲಿದೆ ಎಂದು ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಹೇಳಿದ್ದಾರೆ.

ವಿಧಾನಸೌಧದ ಅಧಿವೇಶನದಲ್ಲಿ ಮಾತನಾಡಿದ ಅವರು, "ಒಂದೊಂದು ಡಿಸಿಸಿ ಬ್ಯಾಂಕಿಗೂ ಒಂದೊಂದು ಮೊತ್ತವನ್ನು ನಿಗದಿ ಮಾಡಲಾಗಿದ್ದು, ಅಲ್ಪಾವಧಿ, ಮಧ್ಯಮಾವಧಿ, ದೀರ್ಘಾವಧಿ ಸಾಲ ಸೌಲಭ್ಯ ರೈತರಿಗೆ ಡಿಸಿಸಿ ಬ್ಯಾಂಕ್‌ಗಳ ಮೂಲಕ ನೀಡಲಾಗುವುದು ಎಂದು ಹೇಳಿದ್ದಾರೆ.

ಚಿನ್ನದ ಮೇಲಿನ ಸಾಲ, ಎಪಿಎಂಸಿ ಕಾಯ್ದೆ ತಿದ್ದುಪಡಿ, ರೈತರಿಗೆ ಕೃಷಿ ಸಾಲ ವಿತರಣೆ ಕುರಿತು ಸದನಕ್ಕೆ ಮಾಹಿತಿ ನೀಡಿದ ಸಚಿವರು ಈ ಬಗ್ಗೆ ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇವನಹಳ್ಳಿ ರೈತ ಹೋರಾಟ | 170ನೇ ದಿನಕ್ಕೆ ಕಾಲಿಟ್ಟ ಧರಣಿ; ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕುವ ಎಚ್ಚರಿಕೆ

ಸಹಕಾರಿ ಸಂಘಗಳಲ್ಲಿ ನೋಂದಣಿ ಮಾಡಿರುವ ರೈತರಿಗೆ, ಅದರಲ್ಲೂ ರೈತ ಮಹಿಳೆಯರಿಗೆ ಮಾತ್ರ ಯಶಸ್ವಿನಿ ಯೋಜನೆಯ ಸೌಲಭ್ಯ ದೊರೆಯಲಿದೆ ಎಂದು ಸಹಕಾರಿ ಸಂಘಗಳ ಸಚಿವ ಎಸ್‌ ಟಿ ಸೋಮಶೇಖರ್‌ ಹೇಳಿದ್ದಾರೆ.

"40% ರೈತರು ಒಂದಲ್ಲ ಒಂದು ಕೋ-ಆಪರೇಟಿವ್ ಸೊಸೈಟಿಗಳಲ್ಲಿ ಇದ್ದಾರೆ. ಹಾಗಾಗಿ ಸಹಕಾರಿ ಸಂಸ್ಥೆಗಳಲ್ಲಿ ಸದಸ್ಯರಾಗಿರುವ ರೈತರಿಗೆ ಚಾಚೂ ತಪ್ಪದೆ ಈ ಯೋಜನೆಯ ಸೌಲಭ್ಯ ನೀಡಲಾಗುತ್ತದೆ" ಎಂದಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್