ಬೆಂಗಳೂರು | ಸಿದ್ದರಾಮಯ್ಯ ಭೇಟಿ; ಶಿರಸಿ ಅರಣ್ಯವಾಸಿಗಳ ಪರ ಸದನದಲ್ಲಿ ದನಿ ಎತ್ತಲು ಮನವಿ

  • ಅರಣ್ಯವಾಸಿಗಳಿಗೆ ಭೂಮಿ ಹಕ್ಕುಪತ್ರ ಕೊಡಿಸುವಂತೆ ಮನವಿ
  • ಸದನದಲ್ಲಿ ಚರ್ಚಿಸುವಂತೆ ಸಿದ್ದರಾಮಯ್ಯ ಅವರಿಗೆ ಒತ್ತಾಯ

ಕಳೆದ 32 ವರ್ಷಗಳಿಂದ ಅರಣ್ಯಭೂಮಿ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ಶಿರಸಿಯ ಅರಣ್ಯವಾಸಿಗಳ ಹೋರಾಟಗಾರ ರವೀಂದ್ರ ನಾಯ್ಕ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ನೇತೃತ್ವದಲ್ಲಿ ಅರಣ್ಯಭೂಮಿ ಹಕ್ಕು ಹೋರಾಟಗಾರರು ಮೂರು ದಶಕಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಸದನದಲ್ಲಿ ನಮ್ಮ ಸಮಸ್ಯೆ ಬಗ್ಗೆ ಚರ್ಚಿಸಿ ಎಂದು ವಿಧಾನಸೌಧದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.

Eedina App

"ಅರಣ್ಯ ಹಕ್ಕು ಕಾಯಿದೆ ಅನುಷ್ಠಾನದಲ್ಲಿನ ವೈಫಲ್ಯ ಸರಿಪಡಿಸುವುದು.  ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಅರಣ್ಯವಾಸಿ ಹೋರಾಟಗಾರರೊಂದಿಗೆ ಉನ್ನತ ಮಟ್ಟದ ಸಭೆ, ಸುಪ್ರೀಂಕೋರ್ಟನಲ್ಲಿ ರಾಜ್ಯ ಸರ್ಕಾರ ಅರಣ್ಯವಾಸಿಗಳ ಪರ ಪ್ರಮಾಣ ಪತ್ರ ಸಲ್ಲಿಸುವ ಬಗ್ಗೆ ಸದನದಲ್ಲಿ ಚರ್ಚಿಸಿ ನ್ಯಾಯ ದೊರಕಿಸುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್‌ ಅವರಿಗೆ ವಿನಂತಿಸಿದ್ದೇವೆ" ಎಂದು ರವೀಂದ್ರ ನಾಯ್ಕ್‌ ಈ ದಿನ.ಕಾಮ್‌ಗೆ ತಿಳಿಸಿದರು.

"ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬೇಕೆಂದು ಸುಪ್ರೀಂಕೋರ್ಟನಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಅಂತಿಮ ವಿಚಾರಣೆ ಹಿನ್ನೆಲೆಯಲ್ಲಿ ಸದನದಲ್ಲಿ  ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಪ್ರಶ್ನೆ ಎತ್ತಿ ಚರ್ಚಿಸಿದರೆ ಅರಣ್ಯವಾಸಿಗಳ ಹೋರಾಟಕ್ಕೆ ಶಕ್ತಿ ದೊರೆಯುವ ಆಶಯ ಹೋರಾಟಗಾರರದ್ದು. ಆ ಹಿನ್ನೆಲೆಯಲ್ಲಿ ಪತಿಪಕ್ಷ ನಾಯಕರನ್ನು ಭೇಟಿಮಾಡಿ ಮನವಿ ಮಾಡಿದ್ದೇವೆ" ಎಂದು ನಾಯ್ಕ್‌ ತಿಳಿಸಿದರು.

AV Eye Hospital ad

ಈ ಸುದ್ದಿ ಓದಿದ್ದೀರಾ? ಪಿರಿಯಾಪಟ್ಟಣ | 'ಜಾಗ ಕೊಡಿಸ್ತೀವಿ ಓಟಾಕಿ ಅಂದ್ರು, ಈಗ ಹಕ್ಕುಪತ್ರ ಕೊಡ್ತಿಲ್ಲ': ಆದಿವಾಸಿಗಳ ಅಳಲು

ಅರಣ್ಯವಾಸಿಗಳ ಪ್ರಮುಖ ಬೇಡಿಕೆಗಳು

  1. ಅರಣ್ಯವಾಸಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ದೌರ್ಜನ್ಯ ತಡೆಯಬೇಕು.
  2. ಅರಣ್ಯವಾಸಿಗಳು ಸೌಲಭ್ಯದಿಂದ ವಂಚಿತರಾಗದ ರೀತಿ ಕಾರ್ಯನಿರ್ವಹಿಸುವುದು.
  3. 1978ರ ಪೂರ್ವ ಅರಣ್ಯ ಅತಿಕ್ರಮಣದಾರರ ಹಕ್ಕು ಪತ್ರ ಶೀಘ್ರ ವಿಲೇವಾರಿ ಮಾಡುವುದು.
  4. ಅರಣ್ಯ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಿದವರನ್ನು ಭೂಮಿ ಮಂಜೂರಾತಿ ಪ್ರಕ್ರಿಯೆ ಮುಗಿಯುವರೆಗೂ ಒಕ್ಕಲೆಬ್ಬಿಸಬಾರದು.
  5. ಧರಣಿನಿರತ ಹಾಗೂ ಕಾಡಿನ ಪ್ರದೇಶದಲ್ಲಿ ವಾಸಿಸುತ್ತಿರುವ ಅರಣ್ಯವಾಸಿಗಳ ಮೇಲೆ ದಾಖಲಿಸಿದ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸುವುದು.
ನಿಮಗೆ ಏನು ಅನ್ನಿಸ್ತು?
0 ವೋಟ್
eedina app