ಆರ್ಥಿಕ ಸ್ಥಿತಿ ಆಧರಿಸಿ, ಪೆಟ್ರೋಲ್-ಡಿಸೇಲ್ ಅಬಕಾರಿ ಸುಂಕ ಇಳಿಕೆ: ಬಸವರಾಜ ಬೊಮ್ಮಾಯಿ

  • ರಾಜ್ಯದಲ್ಲಿ 112 ರೂ. ಗಡಿದಾಟಿದ ಪೆಟ್ರೋಲ್
  • ಮತ್ತೆ ಎದ್ದ ಅಬಕಾರಿ ಸುಂಕ ಕಡಿತದ ಕೂಗು

ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಆಧರಿಸಿ ಪೆಟ್ರೋಲ್ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಇಳಿಸುವ ಕುರಿತು ತಿರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರ ಸರ್ಕಾರ 2021ರ ನವೆಂಬರ್‌ನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಅಲ್ಪ ಪ್ರಮಾಣದಲ್ಲಿ ಇಳಿಕೆ ಮಾಡಿತ್ತು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವೂ ತೈಲ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಇಳಿಸಿತ್ತು. ಪರಿಣಾಮ ಸತತ ಒಂದು ವರ್ಷದಿಂದ ಏರಿಕೆ ಕಂಡಿದ್ದ ಪೆಟ್ರೋಲ್-ಡೀಸೆಲ್‌ ಬೆಲೆ ಕೆಲಕಾಲ ಸ್ಥಿರತೆಯನ್ನು ಕಾಯ್ದುಕೊಂಡಿತ್ತು.

ಬುಧವಾರ ನಡೆದ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ವಿಚಾರವನ್ನು ಉಲ್ಲೇಖಿಸಿದ್ದರು. ಅಲ್ಲದೆ, "ಕರ್ನಾಟಕದ ಈ ಕ್ರಮವನ್ನು ಇತರೆ ರಾಜ್ಯಗಳೂ ಅನುಸರಿಸಬೇಕು" ಎಂದು ಸಲಹೆ ನೀಡಿದ್ದರು.

ಇದನ್ನು ಓದಿದ್ದೀರಾ? ದುಬಾರಿ ದುನಿಯಾ| ಹಾಲಿನ ದರ 3 ರೂ. ಹೆಚ್ಚಳಕ್ಕೆ ಕೆಎಂಎಫ್ ಮನವಿ

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಬೆಲೆಯನ್ನು ಇಳಿಸಲಿದೆಯೇ? ಎಂಬ ಪ್ರಶ್ನೆಗಳು ಮೂಡುತ್ತಿವೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ರಾಜ್ಯದಲ್ಲಿ ಪುನಃ ಪೆಟ್ರೋಲ್ ಮತ್ತು ಡೀಸೆಲ್‌ ಮೇಲಿನ ತೆರಿಗೆ ಕಡಿತ ಮಾಡುವ ಬಗ್ಗೆ ಯೋಚಿಸುತ್ತೇವೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಮುಂದಿನ ಹೆಜ್ಜೆ ಇಡುತ್ತೇವೆ" ಎಂದಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180