ಬೆಳಗಾವಿ ಗಡಿ ವಿವಾದ | ಸಿಎಂ ಬೊಮ್ಮಾಯಿ ತಕ್ಷಣ ಸರ್ವಪಕ್ಷ ಸಭೆ ಕರೆದು ಚರ್ಚಿಸಲಿ: ಸಿದ್ದರಾಮಯ್ಯ

ಸಿದ್ದರಾಮಯ್ಯ
  • ʼನೆಲ-ಜಲ-ಭಾಷೆ ವಿಚಾರದಲ್ಲಿ ಸರ್ಕಾರದ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸುತ್ತದೆʼ
  • ಸುಪ್ರೀಂ ಕೋರ್ಟ್ ವಿಚಾರಣೆ ಎದುರಿಸಲು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಸಿದ್ಧತೆ

"ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆಯಬೇಕು. ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು" ಎಂದು ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ. ಕಾಲವ್ಯಯ ಮಾಡದೆ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿರೋಧ ಪಕ್ಷಗಳ ಸಭೆ ಕರೆದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ‌ ಮಾಡಬೇಕು” ಎಂದಿದ್ದಾರೆ.

“ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿರುವುದು ಆ ರಾಜ್ಯ ಗಡಿ ವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಸಾಕ್ಷಿ” ಎಂದು ಹೇಳಿದ್ದಾರೆ.

“ಬೆಳಗಾವಿ ಗಡಿ ವಿವಾದದ ಬಗ್ಗೆ ನವೆಂಬರ್ 23ರಂದು ಸುಪ್ರೀಂ ಕೋರ್ಟ್ ನಡೆಸಲಿರುವ ವಿಚಾರಣೆಯನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಭರದಿಂದ ಸಿದ್ಧತೆ ನಡೆಸಿದ್ದಾರೆ” ಎಂದಿದ್ದಾರೆ.

AV Eye Hospital ad
ನಿಮಗೆ ಏನು ಅನ್ನಿಸ್ತು?
0 ವೋಟ್
eedina app