ಬೆಳಗಾವಿ | ಮ್ಯಾಕ್ಸಿಕ್ಯಾಬ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಬೈಕ್ ಸವಾರ ದುರ್ಮರಣ

  • ಡಿಕ್ಕಿಯ ರಭಸಕ್ಕೆ ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಸವಾರ
  • ಸದಲಗಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ನಿಪ್ಪಾಣಿ ಹೊರವಲಯದಲ್ಲಿ ಮ್ಯಾಕ್ಸಿಕ್ಯಾಬ್‌ ಮತ್ತು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುಧವಾರ ಸಂಜೆ ನಡೆದಿದೆ.

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿಯನ್ನು ರಾಮಕೃಷ್ಣ ಸನದಿ (32) ಎಂದು ಗುರುತಿಸಲಾಗಿದೆ.

ಮೃತ ರಾಮಕೃಷ್ಣ ಇಚಲಕರಂಜಿ ಕಡೆಯಿಂದ ಬೋರಗಾಂವ ಗ್ರಾಮಕ್ಕೆ ತನ್ನ ಬೈಕ್‌ನಲ್ಲಿ ಹೋಗುತ್ತಿದ್ದರು. ಎದುರಾಗಿ ಬರುತ್ತಿದ್ದ ಮ್ಯಾಕ್ಸಿಕ್ಯಾಬ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಾಮಕೃಷ್ಣ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಬಸವರಾಜ ಯಲಿಗಾರ, ಸದಲಗಾ ಪಿಎಸ್‌ಐ ಎಚ್. ಭರತ್ ಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದಲಗಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180