ಬೆಳಗಾವಿ | ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಡ್ಯಾಂಗಳಲ್ಲಿ ನೀರಿನ ಮಟ್ಟ ಹೆಚ್ಚಳ

  • ಪ್ರವಾಹ ಭೀತಿ ಇರುವವರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ
  • ಬಾವನಸೌಂದತ್ತಿಯಲ್ಲಿರುವ ಸುಗಂಧಾದೇವಿ ದೇವಸ್ಥಾನದ ಮುಳುಗಡೆ 

ಮಳೆ ಅಬ್ಬರ ಕೊಂಚ ಕಡಿಮೆಯಾಗಿದ್ದು, ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದ ಬೆಳಗಾವಿ ರೈತರಿಗೆ, ಈಗ ಮಹಾರಾಷ್ಟ್ರದಲ್ಲಿ ಶುರವಾಗಿರುವ ಸುರಿಯುತ್ತಿರುವ ಮಳೆ ನಿದ್ದೆಗೆಡಿಸಿದೆ.

ಗುರುವಾರದಿಂದ ಮಹಾರಾಷ್ಟ್ರದ ಕೊಂಕಣ ಭಾಗ ಸೇರಿದಂತೆ ವಿವಿಧ ಭಾಗಗಳಲ್ಲಿ ವರುಣನ ಅಬ್ಬರ ಹೆಚ್ಚಳವಾಗಿವೆ. ರಾಜಾಪುರ ಬ್ಯಾರೇಜ್‌ನಿಂದ 1,20,375 ಕ್ಯೂಸೆಕ್ಸ್, ದೂಧಗಂಗಾ ನದಿಯಿಂದ 29,568 ಕ್ಯೂಸೆಕ್ಸ್ ನೀರನ್ನು ಹೊರಬಿಟ್ಟಿರುವುದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 1,49,943 ಕ್ಯೂಸೆಕ್ ನೀರು ಹರಿದುಬರುತ್ತಿದೆ. 

ಇದರಿಂದ ಕೃಷ್ಣಾ ಹಾಗೂ ಅದರ ಉಪನದಿಗಳ ನೀರಿನ ಒಳ ಹರಿವು ಹೆಚ್ಚಾಗಿದೆ. ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ರಾಯಬಾಗದ ಬಾವನಸೌಂದತ್ತಿಯಲ್ಲಿರುವ ಸುಗಂಧಾದೇವಿ ದೇವಸ್ಥಾನ ಮುಳುಗಡೆಯಾಗಿದೆ. 

ಕೊಯ್ನಾ ಜಲಾಶಯವು 105.25 ಟಿಎಂಸಿ ಅಡಿ ನೀರು ಸಂಗ್ರಹಣ ಸಾಮರ್ಥವನ್ನು ಹೊಂದಿದ್ದು, ಸದ್ಯ 83.14 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಮಹಾರಾಷ್ಟ್ರದಲ್ಲಿ ಬೀಳುತ್ತಿರುವ ಮಳೆಯಿಂದ ಇನಷ್ಟು ನೀರು ಹರಿದು ಬರುವ ಸಾದ್ಯತೆ ಇದೆ.

ಈ ಸುದ್ದಿ ಓದಿದ್ದೀರಾ?: ದಕ್ಷಿಣ ಕನ್ನಡ | ದಕ್ಷಿಣ ಭಾರತದ ಏಕೈಕ ಬಿಸಿನೀರಿನ ಬುಗ್ಗೆ ಶಿಥಿಲ: ಪುನಶ್ಚೇತನಕ್ಕೆ ಮುಂದಾದ ಪಂಚಾಯತಿ

ಬೆಳಗಾವಿ, ಹಿರೇಬಾಗೇವಾಡಿ, ನಿಪ್ಪಾಣಿ, ಎಂ.ಕೆ ಹುಬ್ಬಳ್ಳಿಯಲ್ಲಿ ನಿರಂತರವಾಗಿ ತುಂತುರು ಮಳೆ ಸುರಿಯುತ್ತಿದ್ದು, ಮಲಪ್ರಭಾ ನದಿ ಮೈದುಂಬಿ ಹರಿಯುತ್ತಿದೆ. ನವಿಲುತೀರ್ಥ ಜಲಾಶಯ ತುಂಬಲು ನಾಲ್ಕು ಅಡಿ ಬಾಕಿ ಇದ್ದು, ಗುರುವಾರದಿಂದ 3,000 ಕ್ಯುಸೆಕ್ಸ್ ನೀರನ್ನು ಹೊರ ಬಿಡಲಾಗಿದೆ.

“ಜಿಲ್ಲೆಯ ಯಾವ ಭಾಗದಲ್ಲಿಯೂ, ಪ್ರವಾಹ ಎದುರಾಗುವ ಸಾಧ್ಯತೆ ಇಲ್ಲ. ಆದರೂ, ಮುನ್ನೆಚ್ಚರಿಕಾ ಕ್ರಮವಾಗಿ ಕೃಷ್ಣಾ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ” ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ತಿಳಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
1 ವೋಟ್