ಬಳ್ಳಾರಿ | ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

suicide
  • ಬಾದನಹಟ್ಟಿ ಗ್ರಾಮದ ರಾಮಪ್ಪ (30) ಮೃತಪಟ್ಟಿರುವ ದುರ್ದೈವಿ
  • 18 ಲಕ್ಷ ಸಾಲ ಮಾಡಿದ್ದ ರೈತ, ಬೆಳೆ ಕೈಕೊಟ್ಟ ಹಿನ್ನಲೆ ಆತ್ಮಹತ್ಯೆ

ಬೆಳೆ ಸಾಲಬಾಧೆ ತಾಳಲಾರದೆ ರೈತನೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶನಿವಾರ ಆಗಸ್ಟ್‌ 20 ರಂದು ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕುರುಗೋಡು ತಾಲೂಕು ಬಾದನಹಟ್ಟಿ ಗ್ರಾಮದ ರಾಮಪ್ಪ (30) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ರೈತ.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಗಣಿಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಅಹವಾಲು ಸ್ವೀಕರಿಸಿದ ನಿವೃತ್ತ ನ್ಯಾಯಮೂರ್ತಿ

ಮೃತ ರಾಮಪ್ಪ ಬ್ಯಾಂಕ್‌ನಲ್ಲಿ ಮೂರು ಲಕ್ಷ ಮತ್ತು ಖಾಸಗಿಯಾಗಿ 15 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ತನ್ನ ಜಮೀನಿನಲ್ಲಿ ಮೆಣಸಿನಕಾಯಿ, ಅಂಜೂರು ಹಾಗೂ ಮೆಕ್ಕೆಜೋಳ ಬೆಳೆ ಕೈಕೊಟ್ಟ ಹಿನ್ನಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಕುರುಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.
ನಿಮಗೆ ಏನು ಅನ್ನಿಸ್ತು?
0 ವೋಟ್