ಬೀದರ್ | ಸ್ವಾತಂತ್ರ್ಯ ದಿನವೇ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು

  • ಬೀದರ್ ಬಳಿ ಕಂಟೈನರ್, ಕಾರಿಗೆ ಡಿಕ್ಕಿ
  • ಮೃತರು ಹೈದರಾಬಾದ್‌ನ ನಿವಾಸಿಗಳು

ದೇಶವು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಇಂತಹ ಸಂದರ್ಭದಲ್ಲಿ ಬೀದರ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ. 

ಸೋಮವಾರ, ಜಿಲ್ಲೆಯ ಬಂಗೂರು ಬಳಿ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. 

ಈ ಸುದ್ದಿ ಓದಿದ್ದೀರಾ? ಬೀದರ್ | ಬಿಜೆಪಿಯ ಕೇಂದ್ರ ಸಚಿವ ಹಾಗೂ ಶಾಸಕರ ಮಧ್ಯೆ ಜಟಾಪಟಿ

ಮೃತರು ಹೈದರಾಬಾದ್‌ನ ಬೇಗಂ ಪೇಟೆಯ ನಿವಾಸಿಗಳೆಂದು ಗುರುತಿಸಲಾಗಿದೆ. ಮೃತಪಟ್ಟವರ ಕುರಿತು ಯಾವುದೇ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ. 

ನಿಮಗೆ ಏನು ಅನ್ನಿಸ್ತು?
0 ವೋಟ್