ಇಂದಿರಾ ಕ್ಯಾಂಟೀನ್‌ಗಳಿಗೆ ಬಿಜೆಪಿ ಸರ್ಕಾರ ಅನುದಾನ ನೀಡದೆ ಬಡವರ ಹೊಟ್ಟೆಗೆ ಹೊಡೆಯುತ್ತಿದೆ: ಸಿದ್ದರಾಮಯ್ಯ ವಾಗ್ದಾಳಿ

siddaramaih
  • ʼಕ್ಯಾಂಟೀನ್‌ಗಳಿಗೆ ಪ್ರತಿದಿನ ಬರುತ್ತಿದ್ದ 300-400 ಜನರ ಸಂಖ್ಯೆ ಈಗ 50-100ಕ್ಕೆ ಇಳಿದಿದೆʼ
  • ʼಜನ ಬರುವುದಿಲ್ಲ ಎಂಬ ನೆಪವೊಡ್ಡಿ ಕ್ಯಾಂಟೀನ್ ಮುಚ್ಚುವುದು ಸರ್ಕಾರದ ಹುನ್ನಾರʼ

ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ಕಡಿತಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಕಳಪೆ ದರ್ಜೆಯ ಊಟ-ತಿಂಡಿ ನೀಡಿ ಜನ ಬರುವುದಿಲ್ಲ ಎಂಬ ನೆಪವೊಡ್ಡಿ ಇಂದಿರಾ ಕ್ಯಾಂಟೀನ್ ಮುಚ್ಚುವುದು ಬಿಜೆಪಿ ಸರ್ಕಾರದ ಹುನ್ನಾರ” ಎಂದು ಆರೋಪಿಸಿದ್ದಾರೆ.

“ಕ್ಯಾಂಟೀನ್‌ಗಳಿಗೆ ಪ್ರತಿದಿನ ಬರುತ್ತಿದ್ದ 300-400 ಜನರ ಸಂಖ್ಯೆ ಈಗ 50-100ಕ್ಕೆ ಇಳಿದಿದೆಯಂತೆ. ನಗರದ ಬಡವರೆಲ್ಲರೂ ಶ್ರೀಮಂತರಾದರೇ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಳೆಗಾಲ ಅಧಿವೇಶನ | ಮತಾಂತರ ನಿಷೇಧ ಕಾಯ್ದೆಯಿಂದ ಹಿಂದೂ ಧರ್ಮಕ್ಕೆ ಇನ್ನಷ್ಟು ಬಲ ಬಂದಿದೆ: ಆರಗ ಜ್ಞಾನೇಂದ್ರ

“ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗಳಿಗೆ ಅನುದಾನ ನೀಡದೆ ರಾಜ್ಯ ಸರ್ಕಾರವು  ಬಡವರ ಹೊಟ್ಟೆಗೆ ಹೊಡೆಯಲು ಹೊರಟಿದೆ. 2017-2018, 2018-19ರಲ್ಲಿ ಕ್ರಮವಾಗಿ 100 ಮತ್ತು 145 ಕೋಟಿ ರೂ. ಅನುದಾನ ನೀಡಿದ್ದ ಬಿಬಿಎಂಪಿ ಈ ವರ್ಷ ಕೊಟ್ಟಿದ್ದು ಕೇವಲ 60 ಕೋಟಿ ರೂ. ಮಾತ್ರ” ಎಂದು ಟ್ವೀಟ್‌ ಮಾಡಿ ವಾಗ್ದಾಳಿ ನಡೆಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
2 ವೋಟ್