ಕೋಲಾರ | ದೇವರ ಗುಜ್ಜುಕೋಲು ಮುಟ್ಟಿದ ಪ್ರಕರಣ : ಎಂಟು ಮಂದಿ ಬಂಧನ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಉಳ್ಳೇರಹಳ್ಳಿ ಗ್ರಾಮದಲ್ಲಿ ದೇವರ ಗುಜ್ಜುಕೋಲು ಮುಟ್ಟಿದ ಕಾರಣಕ್ಕೆ ದಲಿತ ಬಾಲಕನ ಮೇಲೆ ಹಲ್ಲೆ ಮಾಡಿ, ಆತನ ಕುಟುಂಬಕ್ಕೆ ದಂಡ ವಿಧಿಸಿದ್ದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಉಳ್ಳೇರಹಳ್ಳಿ ಗ್ರಾಮದ ನಾರಾಯಣಸ್ವಾಮಿ, ರಮೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ವೆಂಕಟೇಶಪ್ಪ, ಕೋಟೆಪ್ಪ, ಚಲಪತಿ, ಅರ್ಚಕ ಮೋಹನರಾವ್, ಚಿನ್ನಯ್ಯ ಎಂಬುವರನ್ನು ಬಂಧಿಸಲಾಗಿದೆ.

ಗುಜ್ಜುಕೋಲು ಮುಟ್ಟಿದ ಕಾರಣಕ್ಕೆ ದಲಿತ ಬಾಲಕನಿಗೆ ಸೆಪ್ಟೆಂಬರ್ 8ರಂದು ಥಳಿಸಿ, ₹60 ಸಾವಿರ ದಂಡ ವಿಧಿಸಲಾಗಿತ್ತು. ಬಳಿಕ ಆತನ ತಾಯಿ ಶೋಭಾ ದಲಿತ ಸಂಘಟನೆಗಳ ನೆರವಿನೊಂದಿಗೆ ಸೆಪ್ಟೆಂಬರ್ 20ರಂದು ಮಾಸ್ತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ದೇವರ ಗುಜ್ಜಕೋಲು ಮುಟ್ಟಿದ ಪ್ರಕರಣ | ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ದಲಿತ ಸಂಘಟನೆಗಳ ಆಗ್ರಹ

“ಉಳ್ಳೇರಹಳ್ಳಿ ಗ್ರಾಮದಲ್ಲಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ. ತನಿಖೆ ಮುಂದುವರಿದಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ ದೇವರಾಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್