ಚಿಕ್ಕಮಗಳೂರು| 250ಕ್ಕೂ ಹೆಚ್ಚು ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Bjp Joining
  • ವಿಧಾನಸಭಾ ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ
  • ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸೇರ್ಪಡೆ

ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪಕ್ಷಾಂತರ ಪರ್ವ ಆರಂಭವಾಗಿದೆ. ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ನ 250ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿಗೆ ಸೇರ್ಪೇಡೆಯಾಗಿದ್ದಾರೆ.

ಬಾಳೆಹೊನ್ನೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡರ ಆಪ್ತ, ಮಾಜಿ ತಾಲೂಕು ಪಂಚಾಯತ್‌ ಸದಸ್ಯ ನಾಗೇಶ್‌ ಸೇರಿದಂತೆ 250ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಮೈಸೂರು | ಅಪ್ಪು ನೆನಪಿನಲ್ಲಿ ಮಿಷನ್‌ ಆಸ್ಪತ್ರೆಗೆ ಆಂಬುಲೆನ್ಸ್‌ ನೀಡಿದ ನಟ ಪ್ರಕಾಶ್‌ರಾಜ್ 

ಈ ಹಿಂದೆ ಅಂದರೆ ಜುಲೈ 31ರಂದು ಬಾಳೆಹೊನ್ನೂರಿನಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸುಧಾಕರ್ ಎಸ್‌ ಶೆಟ್ಟಿ ಅವರ ಸಮ್ಮುಖದಲ್ಲಿ 100ಕ್ಕೂ ಅಧಿಕ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರು ಜೆಡಿಎಸ್‌ ಸೇರ್ಪಡೆಯಾಗಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್