ಚಿಕ್ಕಮಗಳೂರು | ರಸ್ತೆ ದುರಸ್ಥಿಗೊಳಿಸುವಂತೆ ಸ್ಥಳೀಯ ನಿವಾಸಿಗಳ ಒತ್ತಾಯ

  • ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿ ನಡೆಸದೇ ಅಸಡ್ಡೆ ಮಾಡಲಾಗುತ್ತಿದೆ
  • 'ರಸ್ತೆ ದುರಸ್ಥಿ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು'

ಚಿಕ್ಕಮಗಳೂರಿನ ಶಂಕರಪುರದ ಮುಖ್ಯ ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ತಕ್ಷಣವೇ ರಸ್ತೆಯನ್ನು ದುರಸ್ಥಿಪಡಿಸಿ ಸಾರ್ವಜನಿಕರಿಗೆ ಸಂಚರಿಸಲು ಅನುಕೂಲ ಮಾಡಿಕೊಡಬೇಕು ಎಂದು ಅಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ.

ಗುಂಡಿ ಬಿದ್ದಿರುವ ರಸ್ತೆಗಳನ್ನು ಕೂಡಲೇ ದುರಸ್ಥಿಗೊಳಿಸಬೇಕು ಎಂದು ಚಿಕ್ಕಮಗಳೂರು ನಗರಸಭೆ ಆಯುಕ್ತ ಬಿ ಸಿ ಬಸವರಾಜ್ ಅವರಿಗೆ ಶಂಕರಪುರ ನಿವಾಸಿಗಳು ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ.

“ಶಂಕಪುರದ 13ನೇ ವಾರ್ಡಿನಲ್ಲಿ ರಸ್ತೆಗಳ ಗುಂಡಿಗಳನ್ನು ಮುಚ್ಚಿಲ್ಲ. ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಸದೇ ಅಸಡ್ಡೆ ಮಾಡಲಾಗುತ್ತಿದೆ” ಎಂದು ಸ್ಥಳೀಯ ನಿವಾಸಿ ಕೀರ್ತಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಿಸಿಯೂಟ ನೌಕರರ ಬಾಕಿ ವೇತನ ಪಾವತಿ ಮತ್ತು ಕನಿಷ್ಟ ವೇತನಕ್ಕೆ ಆಗ್ರಹಿಸಿ ಧರಣಿ

“ರಸ್ತೆ ಗುಂಡಿಗಳನ್ನು ಮುಚ್ಚದಿರುವ ಪರಿಣಾಮ ಸಾರ್ವಜನಿಕರು ವಾಹನದಲ್ಲಿ ಸಂಚರಿಸಲು ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಪೌರಾಯುಕ್ತರು ವಾರ್ಡಿನ ಬಗ್ಗೆ ಕೂಡಲೇ ಗಮನಹರಿಸಿ ರಸ್ತೆಯ ದುರಸ್ಥಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಮನವಿ ಸಲ್ಲಿಸುವ ವೇಳೆ ಸ್ಥಳೀಯ ನಿವಾಸಿಗಳಾದ ನಾರಾಯಣ್, ದಸ್ತಗಿರಿ ಹಾಗೂ ಲಕ್ಷ್ಮೀ ನಾರಾಯಣ ಹಾಜರಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180