ಚಿತ್ರದುರ್ಗ | ಶೈಕ್ಷಣಿಕ ಪ್ರಗತಿಯತ್ತ ಗಮನ ಹರಿಸುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು: ಶಾಸಕಿ ಪೂರ್ಣಿಮಾ

CHITRADURGA
  • 'ಶಾಸಕರ ಅಭಿವೃದ್ಧಿ ನಿಧಿಯಿಂದ 20 ಲಕ್ಷ ರೂ. ಮಂಜೂರು'
  • 'ಎಲ್ಲರೂ ಜವಬ್ದಾರಿಯುತವಾಗಿ ಕೆಲಸ ಮಾಡಬೇಕು'

ಕಾಲೇಜು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು. ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಕಡೆ ಗಮನ ಹರಿಸುವಂತೆ ಮಾರ್ಗದರ್ಶನ ನೀಡಬೇಕು ಎಂದು ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಸಲಹೆ ನೀಡಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 'ಕಾಲೇಜು ಅಭಿವೃದ್ಧಿ ಸಮಿತಿ ಸಭೆ'ಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. "ಕಾಲೇಜಿಗೆ ಸ್ಥಳೀಯ ಶಾಸಕರ ಅಭಿವೃದ್ಧಿ ನಿಧಿಯಿಂದ 20 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ. ಈ ಹಣವನ್ನು ಕಟ್ಟಡ ದುರಸ್ತಿ, ಶುದ್ಧ ಕುಡಿಯುವ ನೀರು ಘಟಕ, ಶೌಚಾಲಯ ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿ ಕೆಲಸಗಳಿಗೆ ಬಳಸಿಕೊಳ್ಳಬೇಕು" ಎಂದು ಸೂಚನೆ ನೀಡಿದರು. 

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಕುಶಲಕರ್ಮಿಗಳಿಗೆ ಸರ್ಕಾರದ ನೆರವು; ₹50 ಸಾವಿರ ಸಹಾಯಧನ

ಮುಂದೆ ಬರುವ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಎಲ್ಲ ರೀತಿಯ ಪೂರ್ವ ಸಿದ್ಧತೆಯ ಕ್ರಮ ಕೈಗೊಳ್ಳುವಂತೆ ಬೋದಕ ಸಿಬ್ಬಂದಿಗಳಿಗೆ ಸೂಚಿಸಿದರು.

ಸಭೆದಲ್ಲಿ ಅಭಿವೃದ್ಧಿ ಸಮಿತಿ ಸದಸ್ಯರಾದ ಎಂ. ಎಸ್ ರಾಘವೇಂದ್ರ,ವಿಶ್ವನಾಥ, ಹೆಚ್ ಆರ್ ಹರೀಶ್, ಸಂದೀಪ್ ಜೈನ್, ಶಶಿಕಲಾ ರವಿಶಂಕರ್ ಮತ್ತಿತ್ತರು ಉಪಸ್ಥಿತರಿದ್ದರು.

ಮಾಸ್‌ ಮೀಡಿಯಾ ಚಿತ್ರದುರ್ಗ ಜಿಲ್ಲಾ ಸಂಯೋಜಕ ಹಾಲರಾಮೇಶ್ವರ.ಹೆಚ್ ಮಾಹಿತಿ ಆಧರಿಸಿದ ವರದಿ
ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180