
- ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಆನಂದ ಮಾಮನಿ ಪ್ರಾರ್ಥಿವ ಶರೀರ ದರ್ಶನ ಪಡೆದ ಸಿಎಂ
- ಯಡಿಯೂರಪ್ಪ, ಕುಮಾರಸ್ವಾಮಿ, ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರಿಂದ ಸಂತಾಪ
ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ ಎಸ್ ಯಡಿಯೂರಪ್ಪ, ಎಚ್ ಡಿ ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಪಕ್ಷಾತೀತವಾಗಿ ಟ್ವಿಟ್ಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ.
ಭಾನುವಾರ ಬೆಳಿಗ್ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಆನಂದ ಮಾಮನಿ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.
“ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬ ವರ್ಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ”’ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ.
— Basavaraj S Bommai (@BSBommai) October 22, 2022
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ pic.twitter.com/PQq96zMKPI
"ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆಶ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.
— Siddaramaiah (@siddaramaiah) October 23, 2022
ಮೃತರ ಆಶ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/Ao1Xsuf7BI
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೂಡ ಟ್ವೀಟ್ ಮಾಡಿ, “ಜನಪ್ರಿಯ ಶಾಸಕರು, ವಿಧಾನಸಭೆಯ ಉಪಸಭಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರು ವಿಧಿವಶರಾದ ಸುದ್ದಿ ಅತ್ಯಂತ ಆಘಾತವನ್ನುಂಟು ಮಾಡಿದೆ. ಅವರ ನಿಧನದಿಂದ ನಾಡು ಒಬ್ಬ ಉತ್ತಮ ನಾಯಕನನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಸಂತಾಪ ತಿಳಿಸಿದ್ದಾರೆ.
“ಸ್ನೇಹಶೀಲತೆ, ಸರಳತೆ, ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಚಂದ್ರಶೇಖರ ಮಾಮನಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚೇತರಿಸಿಕೊಳ್ಳುತ್ತಾರೆಂಬ ವಿಶ್ವಾಸವಿತ್ತು. ಆದರೆ, ಅವರು ಎಲ್ಲರನ್ನೂ ಬಿಟ್ಟು ಅಗಲಿದ್ದು ನೋವು ತಂದಿದೆ. ಮಾಮಿನಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ.ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಸ್ನೇಹಶೀಲತೆ, ಸರಳತೆ, ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದ ವಿಧಾನಸಭೆ ಉಪ ಸಭಾಧ್ಯಕ್ಷರಾದ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದರೆಂಬ ವಾರ್ತೆ ಕೇಳಿ ತೀವ್ರ ಆಘಾತವಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚೇತರಿಸಿಕೊಳ್ಳುತ್ತಾರೆಂಬ ವಿಶ್ವಾಸವಿತ್ತು. ಆದರೆ, ಅವರು ಎಲ್ಲರನ್ನೂ ಬಿಟ್ಟು ಅಗಲಿದ್ದು ನೋವು ತಂದಿದೆ.1/2 pic.twitter.com/NyQlIDMw9x
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 23, 2022
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, “ವಿಧಾನಸಭೆಯ ಉಪ ಸಭಾಧ್ಯಕ್ಷರು ಮತ್ತು ಸವದತ್ತಿ ಕ್ಷೇತ್ರದ ಶಾಸಕರಾಗಿದ್ದ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬಕ್ಕೆ ಸಾಂತ್ವನಗಳು” ಎಂದಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೂಡ ಟ್ವೀಟ್ ಮಾಡಿ, “ಶಾಸಕರು ಹಾಗೂ ವಿಧಾನಸಭೆಯ ಉಪಸಭಾಪತಿ ಆಗಿದ್ದ ಆನಂದ ಮಾಮನಿ ಅವರು ನಿಧನರಾದರು ಎಂಬ ಸುದ್ದಿ ಆಘಾತ ಮೂಡಿಸಿದೆ. ಮೃತರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಮತ್ತು ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ತಿಳಿಸಿದ್ದಾರೆ.
ರಾಜ್ಯ ವಿಧಾನ ಸಭೆಯ ಉಪ ಸಭಾಧ್ಯಕ್ಷರು ಹಾಗೂ ಸವದತ್ತಿ ಕ್ಷೇತ್ರದ ಶಾಸಕರಾಗಿದ್ದ
— DK Shivakumar (@DKShivakumar) October 23, 2022
ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬಕ್ಕೆ ಸಾಂತ್ವನಗಳು. pic.twitter.com/tv3X53XL6Z