ಮುರುಘಾ ಶ್ರೀ ಪ್ರಕರಣ| ಬಂಧನಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದಲಿತ ಸಂಘಟನೆಗಳ ಒಕ್ಕೂಟ

Muruga Shree
  • ಪೋಕ್ಸೋ, ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲು
  • ಮೂರು ದಿನ ಕಳೆದರೂ ಬಂಧನವಾಗದ ಕಾರಣ ರಾಜ್ಯಪಾಲರಿಗೆ ಪತ್ರ

ಚಿತ್ರದುರ್ಗದ ಶಿವಮೂರ್ತಿ ಮುರಘಾ ಶರಣರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟ ಮತ್ತು ದಲಿತ ಸಂಘರ್ಷ ಸಮಿತಿ ರಾಜ್ಯ ಒಕ್ಕೂಟಗಳು ಮಂಗಳವಾರ ರಾಜ್ಯಪಾಲರಿಗೆ ಪತ್ರ ಬರೆದಿವೆ.

ಪೋಕ್ಸೋ ಕಾಯ್ದೆ ಮತ್ತು ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆ 1989ರ ಅನ್ವಯ ಪ್ರಕರಣ ದಾಖಲಾದ 24 ಗಂಟೆಗಳ ಒಳಗಾಗಿ ಅಂತಹ ವ್ಯಕ್ತಿಯ ಬಂಧಿಸಿ ಮಹಾನಗರ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಹಾಜರುಪಡಿಸಿ 164 (5ಎ) ಸಿ.ಆರ್.ಪಿ.ಸಿ ಹಾಗೂ ಸರ್ಕಾರಿ ಮಹಿಳಾ ವೈದ್ಯರ ಸಮ್ಮುಖದಲ್ಲಿ ಪರೀಕ್ಷೆಗೆ ಒಳಪಡಿಸಬೇಕು. ಇದೇ ರೀತಿ ದೂರಿಗೆ ಸಂಬಂಧಿಸಿದಂತೆ ಯಾರ ವಿರುದ್ಧ ದೂರು ನೀಡಲಾಗಿದೆಯೋ ಅವರನ್ನು ಸಹ ಕೂಡಲೇ ಪೊಲೀಸ್ ವಶಕ್ಕೆ ಪಡೆದು ಕ್ರಮ ಜರುಗಿಸಬೇಕು ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಆದರೆ, ರಾಜ್ಯ ಸರ್ಕಾರ ಬಲಾಢ್ಯರಿಗೆ ಒಂದು ಕಾನೂನು, ಬಡವರಿಗೆ ಒಂದು ಕಾನೂನು ಎಂದು ವರ್ತಿಸುತ್ತಿದ್ದಾರೆ. ಪೊಲೀಸ್ ಇಲಾಖೆ ಕೂಡ ತನ್ನ ಕರ್ತವ್ಯ, ಕಾನೂನು ಮರೆತು ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ.

Image

ಈ ಎಲ್ಲದರ ಹಿನ್ನೆಲೆಯಲ್ಲಿ ಆಗಸ್ಟ್ 29ರಂದು ಶರಣರು ಬಹಿರಂಗ ಹೇಳಿಕೆ ನೀಡಿದ್ದು, ನಾನು ಈ ನೆಲದ ಕಾನೂನು ಗೌರವಿಸುತ್ತೇನೆ ಎಂದಿದ್ದಾರೆ. ದಲಿತ ಹೆಣ್ಣು ಮಕ್ಕಳು ಬಲಾಢ್ಯರ ಸ್ವತ್ತಲ್ಲ. ಈ ಸಂಬಂಧವಾಗಿ ಸರ್ಕಾರ ನಿರ್ಲಕ್ಷ್ಯ ತೋರಿದರೆ ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪೋಕ್ಸೋ ಕಾಯಿದೆಯಲ್ಲಿ ಮೊದಲು ವಶಕ್ಕೆ, ನಂತರ ಎಫ್‌ಐಆರ್‌; ಮುರುಘಾ ಶ್ರೀ ಪ್ರಕರಣದ ಬಗ್ಗೆ ಕಾನೂನು ತಜ್ಞರು ಏನಂತಾರೆ?

ಆದ್ದರಿಂದ ಸರ್ಕಾರ ಕೂಡಲೇ ಕಾನೂನು ಪಾಲಿಸಿ ಶ್ರೀಗಳನ್ನು ಪೊಲೀಸ್ ವಶಕ್ಕೆ ಪಡೆದು ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಹಾಗೂ ಅವರ ಕುಟುಂಬಗಳಿಗೆ ನ್ಯಾಯ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿ, ಆರ್‌ಪಿಐ(ಕೆ) ರಾಜ್ಯಾಧ್ಯಕ್ಷ ಡಾ. ಆರ್ ಮೋಹನ್ ರಾಜ್, ಎಸ್ಸಿ ಎಸ್ಟಿ ಗುತ್ತಿಗೆದಾರರ ಸಂಘದ ಮಹದೇವಸ್ವಾಮಿ, ದಲಿತ ಮಾನವ ಹಕ್ಕುಗಳ ಸಮಿತಿ ರಾಜ್ಯ ಸಂಚಾಲಕ ಬಸವರಾಜ್  ಕೌತಾಳ್ ಆಗ್ರಹಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್