ಸಹಸ್ರದತ್ತ ಕಾಂಗ್ರೆಸ್‌ ಟಿಕೆಟ್‌ ಅರ್ಜಿ; ಗುಟ್ಟಾಗಿಯೇ ಉಳಿದ ಸಿದ್ದರಾಮಯ್ಯ ನಡೆ

ಸಿದ್ದರಾಮಯ್ಯ
  • 1200 ಅರ್ಜಿಗಳು ಸೇಲ್‌, 952 ಅರ್ಜಿಗಳು ಕೆಪಿಸಿಸಿಗೆ ಸಲ್ಲಿಕೆ
  • ಸಲ್ಲಿಕೆಯಾದ ಅರ್ಜಿಗಳಿಂದ ₹16.9 ಕೋಟಿ ಹಣ ಸಂಗ್ರಹ

ಮುಂಬರುವ ವಿಧಾನಸಭಾ ಚುನಾವಣೆಗೆ ಟಿಕೆಟ್‌ಗಾಗಿ ಕಾಂಗ್ರೆಸ್‌ನಿಂದ ಅರ್ಜಿ ಸಲ್ಲಿಸುತ್ತಿರುವವರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ.

ಕೆಪಿಸಿಸಿ ಮೂಲಗಳ ಪ್ರಕಾರ, ಈವರೆಗೆ ಒಟ್ಟು 1200 ಅರ್ಜಿಗಳನ್ನು ಆಕಾಂಕ್ಷಿಗಳು ಪಡೆದುಕೊಂಡಿದ್ದಾರೆ. ಈ ಪೈಕಿ 952 ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ 250 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.

Eedina App

ಈ ಮೊದಲು ನ.1ರಿಂದ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಮತ್ತಷ್ಟು ಜನರು ಅರ್ಜಿ ಸಲ್ಲಿಕೆ ಮಾಡಲು ಕಾಲಾವಕಾಶ ಕೋರಿದ್ದರಿಂದ ಮತ್ತು ಬೇರೆ ಬೇರೆ ಪಕ್ಷಗಳ ನಾಯಕರು ಕಾಂಗ್ರೆಸ್ಸಿಗೆ ಬರಲಿದ್ದಾರೆ ಎನ್ನುವ ಮಾಹಿತಿ ಮೇರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 21ರವರೆಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿಸ್ತರಿಸಿದ್ದಾರೆ.

ಸಲ್ಲಿಕೆಯಾದ 952 ಅರ್ಜಿಗಳ ಪೈಕಿ ಒಟ್ಟು ₹16.9 ಕೋಟಿ ಮೊತ್ತ ಸಂಗ್ರಹವಾಗಿದೆ. ಅರ್ಜಿ ಸಲ್ಲಿಸುವ ಪ್ರತಿಯೊಬ್ಬರು ಅರ್ಜಿ ಶುಲ್ಕ ₹5 ಸಾವಿರ ಜೊತೆಗೆ, ಸಾಮಾನ್ಯ ವರ್ಗದ ಆಕಾಂಕ್ಷಿಗಳಿಗೆ ₹2 ಲಕ್ಷ ಮತ್ತು ಎಸ್‌ಸಿ, ಎಸ್‌ಟಿ ಸಮುದಾಯದ ಆಕಾಂಕ್ಷಿಗಳಿಗೆ ₹1 ಲಕ್ಷ ಸಲ್ಲಿಸಲು ನಿಗದಿ ಮಾಡಲಾಗಿದೆ.

AV Eye Hospital ad

ಗುಟ್ಟಾಗಿಯೇ ಉಳಿದ ಸಿದ್ದರಾಮಯ್ಯ ನಡೆ! 

ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈವರೆಗೂ ಅರ್ಜಿ ಸಲ್ಲಿಸಿಲ್ಲ. ಇದರಿಂದಾಗಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ವಿಚಾರ ಸದ್ಯಕ್ಕೆ ಗುಟ್ಟಾಗಿಯೇ ಉಳಿದಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶಿಕಾರಿಪುರದಿಂದ ಸ್ವರ್ಧಿಸಲು ಕಾಂಗ್ರೆಸ್‌ ಟಿಕೆಟ್‌ಗಾಗಿ 8 ಮಂದಿ ಅರ್ಜಿ

ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಈಗಾಗಲೇ ಅರ್ಜಿ ಪಡೆದಿದ್ದು, ವರುಣ ಕ್ಷೇತ್ರದಿಂದ ಅವರು ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ.

ಕಾಂಗ್ರೆಸ್ಸಿನ ಹಿರಿಯ ನಾಯಕ 92 ವರ್ಷದ ಶಾಮನೂರು ಶಿವಶಂಕರಪ್ಪ ಕೂಡಾ ಈ ಭಾರಿಯೂ ಸ್ಪರ್ಧಿಸಲು ಉತ್ಸುಕರಾಗಿದ್ದು, ಅವರೂ ಸಹ ಅರ್ಜಿ ಸಲ್ಲಿಸಿದ್ದಾರೆ. ಇನ್ನು, ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಅವರು ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸಲು ಅವಕಾಶ ಕೋರಿದ್ದು, ಶೃಂಗೇರಿ, ತೀರ್ಥಹಳ್ಳಿ, ಚಿಕ್ಕಮಗಳೂರು ಹಾಗೂ ಪಾಂಡವಪುರ ಕ್ಷೇತ್ರಗಳ ಪೈಕಿ ಯಾವುದಾದರೂ ಕ್ಷೇತ್ರ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ನಿಮಗೆ ಏನು ಅನ್ನಿಸ್ತು?
3 ವೋಟ್
eedina app