ರಾಜ್ಯಾದ್ಯಂತ ಆಗಸ್ಟ್‌ 23ರಿಂದ ಒಂದು ವಾರಗಳ ಕಾಲ ನಿರಂತರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ಆಗಸ್ಟ್‌ 12ರಿಂದ ಗಣನೀಯವಾಗಿ ಕಡಿಮೆಯಾಗಿರುವ ಮಳೆ
  • ಮುಂದಿನ ಒಂದು ವಾರ ಉತ್ತಮ ಮಳೆಯಾಗುವ ಸಾಧ್ಯತೆ

ನಿರಂತರವಾಗಿ ಸುರಿಯುತ್ತಿದ್ದ ಮಳೆಗೆ ಬೆಂಗಳೂರಿನ ಜನರು ಹೈರಾಣಾಗಿದ್ದರು. ಕಳೆದ ನಾಲ್ಕೈದು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು, ಜನರು ನಿಟ್ಟುಸಿರುಬಿಟ್ಟಿದ್ದರು. ಆದರೆ, ಆಗಸ್ಟ್‌ 23ರಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ನಿರಂತರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಮಳೆ ಅಬ್ಬರ ಆಗಸ್ಟ್‌ 12ರಿಂದ ಕಡಿಮೆಯಾಗಿದ್ದರೂ, ಸಂಪೂರ್ಣವಾಗಿ ಮಳೆ ನಿಂತಿಲ್ಲ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆಯಿದ್ದು, ಕೆಲವೆಡೆ ಭೂಕುಸಿತ, ಜೀವಹಾನಿ, ಬೆಳೆ ನಷ್ಟದಿಂದ ಜನರು ಸಮಸ್ಯೆ ಅನುಭವಿಸುವಂತಾಗಿದೆ.

"ಇದೀಗ, ಮತ್ತೆ ಆಗಸ್ಟ್‌ 23ರಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ" ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್ ಪ್ರಕಾಶ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಜೂನ್‌ನಿಂದ ಇಲ್ಲಿಯವರೆಗೆ ವಾಡಿಕೆಗಿಂತ ಶೇ.23ರಷ್ಟು ಅಧಿಕ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ.120, ಉತ್ತರ ಒಳನಾಡಿನಲ್ಲಿ ಶೇ.33, ಮಲೆನಾಡಿನಲ್ಲಿ ಶೇ.16ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

ಈ ಸುದ್ದಿ ಓದಿದ್ದೀರಾ?: ಬಾಗಲಕೋಟೆ | ಮಹಾಲಿಂಗಪುರ ತಾಲೂಕು ಹೋರಾಟ; ಬಂದ್ ಯಶಸ್ವಿ

ರಾಜ್ಯದಲ್ಲಿ ಆಗಸ್ಟ್ 1ರಿಂದ ಇಲ್ಲಿಯವರೆಗೆ 192 ಮಿ.ಮೀನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ.55ರಷ್ಟು ಅಧಿಕ ಮಳೆಯಾಗಿದೆ. ಈ ಅವಧಿಯಲ್ಲಿ ರಾಜ್ಯದ ವಾಡಿಕೆ ಮಳೆ ಪ್ರಮಾಣ 124 ಮಿ.ಮೀ., ದಕ್ಷಿಣ ಒಳನಾಡಿನಲ್ಲಿ 137 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.253ರಷ್ಟು ಅತ್ಯಧಿಕ ಮಳೆಯಾಗಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180