ಧಾರವಾಡ | ಮತದಾರರ ಪಟ್ಟಿ ಪರಿಷ್ಕರಣೆ ಆರಂಭ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Deputy Commissioner Gurudatta Hegde
  • ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಅಭಿಯಾನ ಆರಂಭ
  • ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಲಾಗುತ್ತಿದೆ

ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಜಿಲ್ಲಾಡಳಿತವು ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಎಸ್ಆರ್) ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ನಗರದ ಕಡಪ ಮೈದಾನದಿಂದ ಕರ್ನಾಟಕ ಕಾಲೇಜಿನವರೆಗೆ ಮತದಾನ ಕುರಿತು ಜಾಗೃತಿ ಪಾದಯಾತ್ರೆ ನಡೆಸಲಾಗಿದ್ದು, ಬಳಿಕ ಅವರು ಮಾತನಾಡಿದರು. “ನವೆಂಬರ್ 9ರಿಂದ ಡಿಸೆಂಬರ್ 8ರವರೆಗೆ ಮತದಾನ ಪಟ್ಟಿ ಪರಿಷ್ಕರಣೆ ಅಭಿಯಾನ ನಡೆಯಲಿದೆ. ಅರ್ಹ ನಾಗರಿಕರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸುವುದು ಮತ್ತು ಅನರ್ಹರನ್ನು ಪಟ್ಟಿಯಿಂದ ಕೈಬಿಡುವುದು ಅಭಿಯಾನದ ಉದ್ದೇಶವಾಗಿದೆ” ಎಂದರು.

“ಮತದಾರರ ಸರಿಯಾದ ವಿವರಗಳನ್ನು ಪಟ್ಟಿಯಲ್ಲಿ ನೋಂದಾಯಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಹ ನಾಗರಿಕರಿಗೆ ಅನುವು ಮಾಡಿಕೊಡಲು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗಿದೆ” ಎಂದು ಹೇಳಿದರು.

“2023 ಜನವರಿ 1ರೊಳಗೆ 18 ವರ್ಷ ವಯಸ್ಸನ್ನು ಪೂರ್ಣಗೊಳಿಸುವವರು ಮತದಾರರಾಗಿ ನೋಂದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಬೂತ್ ಮಟ್ಟದ ಅಧಿಕಾರಿಗಳು ನವೆಂಬರ್ 9ರಿಂದ ಡಿಸೆಂಬರ್ 8ರವರೆಗೆ ಆಯಾ ಪ್ರದೇಶಗಳ ಎಲ್ಲ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ, ಸೇರ್ಪಡೆ, ತೆಗೆದುಹಾಕುವಿಕೆ, ಹೆಸರುಗಳ ಬದಲಾವಣೆ ಮತ್ತು ವಿಳಾಸಗಳ ಬದಲಾವಣೆಗಾಗಿ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. 2023 ಜನವರಿ 1ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು” ಎಂದು ತಿಳಿಸಿದರು.

AV Eye Hospital ad

"ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹೆಸರುಗಳನ್ನು ನಕಲು ಮಾಡುವುದನ್ನು ತಪ್ಪಿಸಲು ಆಧಾರ್ ಜೋಡಣೆ ಸಹಾಯ ಮಾಡುತ್ತದೆ" ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

“ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಹೊಸದಾಗಿ ಸೇರಿಸಲು ಅಥವಾ ಪಟ್ಟಿಯಲ್ಲಿರುವ ಹೆಸರುಗಳನ್ನು ಸರಿಪಡಿಸಲು, ಜನರು ನಮೂನೆ 6ರಲ್ಲಿ ಅರ್ಜಿ ಸಲ್ಲಿಸಬೇಕು. ಹೆಸರು ಮತ್ತು ವಿಳಾಸದಲ್ಲಿ ತಿದ್ದುಪಡಿ ಮಾಡಿಸಬೇಕಾದವರು ಫಾರ್ಮ್ 8ರಲ್ಲಿ ಅರ್ಜಿ ಸಲ್ಲಿಸಬೇಕು. ಹೆಸರುಗಳನ್ನು ತೆಗೆಸಲು ಫಾರ್ಮ್ 7ರಲ್ಲಿ ಸಲ್ಲಿಸಬೇಕು. ತಮ್ಮ ವಿಳಾಸವನ್ನು ಮತ್ತೊಂದು ವಿಧಾನಸಭಾ ಕ್ಷೇತ್ರಕ್ಕೆ ಬದಲಾಯಿಸಲು ನಮೂನೆ 8ಎ ಫಾರ್ಮ್‌ನಲ್ಲಿ ಅರ್ಜಿ ಸಲ್ಲಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಯಳವಾರ ಪಶು ಆಸ್ಪತ್ರೆಗೆ ವೈದ್ಯಾಧಿಕಾರಿ ನೇಮಿಸುವಂತೆ ಮನವಿ

ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಸುರೇಶ್ ಇಟ್ನಾಳ್ ಮಾತನಾಡಿ, "ಅರ್ಹ ನಾಗರಿಕರಿಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಸೇರಿಸಲು ಚುನಾವಣಾ ಆಯೋಗವು ವರ್ಷಕ್ಕೆ ನಾಲ್ಕು ಬಾರಿ ಅವಕಾಶ ನೀಡಿದೆ. ಜೊತೆಗೆ ಶಾಲಾ ಕಾಲೇಜುಗಳಲ್ಲಿ ಮತದಾರರ ಸಾಕ್ಷರತಾ ಕ್ಲಬ್‌ಗಳನ್ನು ಸ್ಥಾಪಿಸಲಾಗಿದೆ. ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ” ಎಂದು ಹೇಳಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app