ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಅನುಮತಿ ಕೋರಿ ಸರ್ಕಾರಕ್ಕೆ ಪತ್ರ ಬರೆದ ಡಿ ಕೆ ಶಿವಕುಮಾರ್‌

D K Shivakumar
  • ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಆಚರಿಸಲು ಅನುಮತಿ ಕೋರಿ ಬೊಮ್ಮಾಯಿಗೆ ಮನವಿ 
  • ʼನ್ಯಾಷನಲ್‌ ಕಾಲೇಜು ಮೈದಾನ ಸಾಧ್ಯವಾಗದಿದ್ದರೆ ಕಂಠೀರವ ಸ್ಟೇಡಿಯಂನಲ್ಲಿ ಅವಕಾಶ ನೀಡಿʼ

ಪಕ್ಷಾತೀತವಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸ ಆಚರಣೆಗೆ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಆಚರಿಸಲು ಅನುಮತಿ ಕೋರಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಮಾಡಿಕೊಂಡಿದ್ದಾರೆ.

ಈ ಕುರಿತು ಮಂಗಳವಾರ ಪತ್ರ ಬರೆದಿರುವ ಅವರು, “ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಪಕ್ಷಾತೀತವಾಗಿ ರಾಜ್ಯದ ಎಲ್ಲ ಮೂಲೆಗಳಿಂದಲೂ ದೇಶಭಕ್ತರು ಬಂದು ಭಾಗವಹಿಸಲಿದ್ದಾರೆ. ಇಂತಹ ಪ್ರಮುಖ ಕಾರ್ಯಕ್ರಮ ಆಯೋಜಿಸಲು ಬಸವನಗುಡಿಯ ನ್ಯಾಷನಲ್‌ ಕಾಲೇಜು ಅತ್ಯಂತ ಸೂಕ್ತವಾದ ಜಾಗ” ಎಂದು ಅವರು ತಿಳಿಸಿದ್ದಾರೆ.

“ನಾವು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದು ಅವಕಾಶಕ್ಕಾಗಿ ವಿನಂತಿ ಸಲ್ಲಿಸಿದ್ದೇವೆ. ಆದರೆ, ಇದುವರೆಗೂ ಬಿಬಿಎಂಪಿಯಿಂದ ನಮಗೆ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ. ಈ ವಿಷಯವನ್ನು ಕೂಡ ನಿಮ್ಮ ಗಮನಕ್ಕೆ ತರುತ್ತಿದ್ದೇವೆ” ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಿಎಸ್‌ಐ ಅಕ್ರಮ ಭಾಗ-5| ಖಾಕಿ ತೊಟ್ಟ ಅಧಿಕಾರಿಗಳು ಬೆತ್ತಲಾಗಿರುವ ಬಗೆಯೇ ಭಯಾನಕ!

“ಒಂದು ವೇಳೆ ಈ ಆವರಣವನ್ನು ನೀಡುವುದಕ್ಕೆ ಅನಾನುಕೂಲವೇ ಆಗಿದ್ದರೆ ಅದರ ಬದಲಾಗಿ ನಮಗೆ ಕಂಠೀರವ ಸ್ಟೇಡಿಯಂನಲ್ಲಿ ಅವಕಾಶ ಮಾಡಿಕೊಡುವಂತೆ ಕೋರುತ್ತೇನೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ” ಎಂದು ಪತ್ರದಲ್ಲಿ ಡಿ ಕೆ ಶಿವಕುಮಾರ್‌ ಕೋರಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app