ದೊಡ್ಡಬಳ್ಳಾಪುರ | ಜಾತ್ರೆಯಲ್ಲಿ ಆಟವಾಡುತ್ತಿದ್ದ ಬಾಲಕ ಸಾವು

Date:

ಮುತ್ಯಾಲಮ್ಮ ಜಾತ್ರೆಯ ಸಂಭ್ರಮದಲ್ಲಿ ಕುಟುಂಬದ ಸದಸ್ಯರ ಜೊತೆಗೆ ಕುಣಿದು ಕುಪ್ಪಳಿಸಿ ಖುಷಿಪಡುತ್ತಿದ್ದ ಬಾಲಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಮಂಜುನಾಥ್ ಎಂಬುವವರ ಪುತ್ರ ಶ್ರೇಯಸ್(9) ಮೃತ ಬಾಲಕ. ಈತ ಮನೆಯವರೊಂದಿಗೆ ಮುತ್ಯಾಲಮ್ಮ ಜಾತ್ರೆಗೆ ಹೋಗಿದ್ದ.

ಜಾತ್ರೆಯಲ್ಲಿ ಹಾಕಿದ್ದ ಅಮ್ಯೂಸ್‌ಮೆಂಟ್ ಕ್ರೀಡೆಗಳಲ್ಲಿ ಭಾಗಿಯಾಗಿದ್ದ ಬಾಲಕ ಬಳಿಕ ಬೌನ್ಸಿ ಬಲೂನ್‌ನಲ್ಲಿ ಆಟವಾಡಲು ತೆರಳಿದ್ದ. ಇತರ ಮಕ್ಕಳಂತೆ ಆತನೂ ಕುಣಿಯುತ್ತಾ, ಜಿಗಿಯುತ್ತಾ ಆಟವಾಡುತ್ತಿದ್ದ. ನೋಡುನೋಡುತ್ತಿದ್ದಂತೆಯೇ ಆತ ಆಟವಾಡುವುದನ್ನು ನಿಲ್ಲಿಸಿ, ಕುಸಿದು ಬಿದ್ದಿದ್ದಾನೆ. ಇದನ್ನು ಗಮನಿಸಿದ ಮನೆಯವರು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆ ವೇಳೆಗಾಗಲೇ ಬಾಲಕ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಬಾಲಕನ ಸಾವಿಗೆ ನಿಖರ ಕಾರಣ ಸ್ಪಷ್ಟವಾಗಿಲ್ಲ. ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿರಬಹುದು ಎಂಬ ಸಂಶಯವಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ...

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...