ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಣೆ: ಸಿಎಂ ಬೊಮ್ಮಾಯಿ ಘೋಷಣೆ

cm bommayi
  • ಕೃಷಿ ಕಾರ್ಮಿಕರ ಮಕ್ಕಳಿಗೆ ಸ್ವಾತಂತ್ರ್ಯೋತ್ಸವದಂದು ಉಡುಗೊರೆ 
  • ಸಿಎಂ ಬೊಮ್ಮಾಯಿ ಅವರಿಂದ ಹೊಸ ಯೋಜನೆಗಳ ಘೋಷಣೆ

ವಿದ್ಯಾನಿಧಿ ಯೋಜನೆಯನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಬೆಂಗಳೂರಿನ ಮಾಣಿಕ್‌ ಷಾ ಪರೇಡ್ ಮೈದಾನದಲ್ಲಿ 5ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಜನತೆಯನ್ನುದ್ದೇಶಿಸಿ ಅವರು ಮಾತನಾಡಿದರು. 

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹಲವು ಹೊಸ ಯೋಜನೆಗಳನ್ನು ಘೋಷಿಸಿದ ಸಿಎಂ ರೈತರ ಮಕ್ಕಳಿಗೆ ಜಾರಿಗೆ ಮಾಡಿರುವ ವಿದ್ಯಾನಿಧಿ ಯೋಜನೆಯನ್ನು ಮುಂದೆ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ನುಡಿದಿದ್ದಾರೆ.

ಹೊಸ ಯೋಜನೆಗಳ ಘೋಷಣೆ

ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಸರ್ಕಾರ ರಾಜ್ಯದ ರೈತರು, ಶ್ರಮಿಕರು, ಸೈನಿಕರ ಕ್ಷೇಮಾಭಿವೃದ್ಧಿಗೆ ಕೆಲವು ಕೊಡುಗೆಗಳನ್ನು ನೀಡಲು ತೀರ್ಮಾನಿಸಿದೆ. ಅಲ್ಲದೆ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವತಿಯಿಂದ ಕುಂಬಾರ, ಕಮ್ಮಾರ, ಬಡಿಗ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯವವರು, ವಿಶ್ವಕರ್ಮರು ಸೇರಿದಂತೆ ಮತ್ತಿತ್ತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ರೂಗಳವರೆಗೆ ಸಾಲ ಸೌಲಭ್ಯ ಯೋಜನೆ ಜಾರಿಗೊಳಿಸಲಾಗುವುದು ಎಂದು ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಷ್ಟ್ರಧ್ವಜ ಹಾರಿಸಲು ಸರ್ಕಾರ ಜನರನ್ನು ಪ್ರೇರೇಪಿಸುತ್ತಿರುವ ರೀತಿ ಆಕ್ಷೇಪಾರ್ಹ" ಪ್ರೊ.ಬಿ.ಕೆ.ಚಂದ್ರಶೇಖರ್

ಸಿಎಂ ಭರವಸೆ ಕುರಿತಂತೆ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಬಯ್ಯಾರೆಡ್ಡಿ ಅವರು ಈದಿನ.ಕಾಮ್‌ಗೆ ಪ್ರತಿಕ್ರಿಯಿಸಿದ್ದಾರೆ. "ಇದುವರೆಗೆ ಯಾರೂ ಕೃಷಿ ಕೂಲಿ ಕಾರ್ಮಿಕರ ಮಕ್ಕಳನ್ನು ಗುರುತಿಸಿರಲಿಲ್ಲ. ಚುನಾವಣೆ ಹತ್ತಿರದಲ್ಲಿರುವುದರಿಂದ ಹಲವು ಯೋಜನೆಗಳನ್ನು ಘೋಷಣೆ ಮಾಡಿರಬಹುದು. ಆದರೆ, ಯೋಜನೆ ಒಳ್ಳೆಯದಿದೆ. ಕೃಷಿ ಕೂಲಿ ಕಾರ್ಮಿಕರ ಮಕ್ಕಳಿಗೆ ಕೊಡಲು ಯೋಜಿಸಿರುವ ಯೋಜನೆಯಯನ್ನು ಪಡೆದುಕೊಳ್ಳಲು ಇರುವ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಬೇಕು ಹಾಗೂ ಮೊತ್ತವನ್ನು ಹೆಚ್ಚಿಸಬೇಕು ಆಗ ವಿದ್ಯಾರ್ಥಿಗಳಿಗೆ ಸೂಕ್ತ ರೀತಿಯಲ್ಲಿ ಸಹಕಾರಿಯಾಗಲಿದೆ" ಎಂದರು.

ನಿಮಗೆ ಏನು ಅನ್ನಿಸ್ತು?
1 ವೋಟ್