ಸ್ವಾತಂತ್ರ್ಯದ ಅಮೃತ ಮಹೋತ್ಸವ | ಕಾಂಗ್ರೆಸ್ ನಾಯಕರಿಂದ ಧ್ವಜಾರೋಹಣ

Congress
  • ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಧ್ವಜಾರೋಹಣ
  • ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಧ್ವಜಾರೋಹಣ

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹನವನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೋಮವಾರ ನೆರವೇರಿಸಿದರು.

ವಿಧಾಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಮ್ ಅಹ್ಮದ್, ಧ್ರುವನಾರಾಯಣ್, ಗೋವಾ, ಪುದುಚೇರಿ, ತಮಿಳುನಾಡು ರಾಜ್ಯ ಕಾಂಗ್ರಸ್ ಉಸ್ತುವಾರಿ ದಿನೇಶ್ ಗುಂಡೂರಾವ್, ಹಿರಿಯ ಮುಖಂಡ ಎಸ್ ಆರ್ ಪಾಟೀಲ್, ಮಾಜಿ ಕೇಂದ್ರ ಸಚಿವರಾದ ವೀರಪ್ಪ ಮೊಯ್ಲಿ ಮತ್ತಿತರರು ಉಪಸ್ಥಿತರಿದ್ದರು.

Image
Siddaramaiah

ಸಿದ್ದರಾಮಯ್ಯ ನಿವಾಸದಲ್ಲಿ ಧ್ವಜಾರೋಹಣ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ‌ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪರಮೇಶ್ವರ ನಾಯಕ, ರಿಜ್ವಾನ್, ಮಾಜಿ ಶಾಸಕ ಅಶೋಕ್ ಪಟ್ಟಣ ಹಾಜರಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್