
- ಹಿಂದಿ ಹೇರಿಕೆಯನ್ನು ಕನ್ನಡಿಗರು ಎಂದೂ ಸಹಿಸುವುದಿಲ್ಲ
- ಕನ್ನಡಕ್ಕೆ ಧಕ್ಕೆ ಬಂದರೆ ಬೀದಿಗಿಳಿದು ಹೋರಾಟ ಮಾಡಲು ಸಿದ್ಧ
ಕನ್ನಡ ಭಾಷೆ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತಿದೆ. ಆಂಗ್ಲ ಭಾಷೆಯ ವ್ಯಾಮೋಹಹೆಚ್ಚುತ್ತಿದೆ. ಕನ್ನಡ ಭಾಷೆ ನಮ್ಮೆಲ್ಲರ ಉಸಿರಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾಧ್ಯಕ್ಷ ಚಂದ್ರಶೇಖರ ಪೂಜಾರ್ ಹೇಳಿದರು.
ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಜನಸೇವಾ ಫೌಂಡೇಷನ್ ಟ್ರಸ್ಟ್, ಮೌಲಾನಾ ಅಜಾದ್ ಫೌಂಡೇಷನ್ ಟ್ರಸ್ಟ್ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಆಂಗ್ಲ ಭಾಷೆಯ ವ್ಯಾಮೋಹ, ಹಿಂದಿ ಹೇರಿಕೆಯನ್ನು ಕನ್ನಡಿಗರು ಎಂದೂ ಸಹಿಸುವುದಿಲ್ಲ. ಕನ್ನಡಕ್ಕೆ ಧಕ್ಕೆ ಬರುತ್ತದೆಂದರೆ ಬೀದಿಗಿಳಿದು ಹೋರಾಟ ಮಾಡಲು ಸಿದ್ಧರಾಗಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ನ ತಾಲೂಕು ಅಧ್ಯಕ್ಷ ಪ್ರೊಫೆಸರ್ ಎಂ ಜಿ ಗಚ್ಚನ್ನವರ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಪೂಜಾರ್, ಮುಂಡರಗಿ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಾಲೂಕಿನ ಗಣ್ಯ ವ್ಯಕ್ತಿಗಳು ಹಾಗೂ ಎಲ್ಲ ಕನ್ನಡಪರ ಸಂಘಟನೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಕನ್ನಡ ಅಭಿಮಾನಿಗಳು ಇದ್ದರು.
ಈ ಸುದ್ದಿ ಓದಿದ್ದೀರಾ? ಕೊಡಗು | ಕನ್ನಡ ನಾಡು-ನುಡಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ: ಕಸಾಪ ಜಿಲ್ಲಾಧ್ಯಕ್ಷ