
- ನಾನೇ ಅಭ್ಯರ್ಥಿಯೆಂದ ಭವಾನಿ ರೇವಣ್ಣ
- ಜೆಡಿಎಸ್ ವರಿಷ್ಠರಿಂದ ನಿರ್ಣಯ
ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ನನ್ನನ್ನು ಕಣಕ್ಕಿಳಿಸಲು ಜೆಡಿಎಸ್ ವರಿಷ್ಠರು ನಿರ್ಣಯ ಕೈಗೊಂಡಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮಾಹಿತಿ ನೀಡಿದ್ದಾರೆ.
ಹಾಸನ ತಾಲೂಕಿನ ಸಾಲಗಾಮೆ ಹೋಬಳಿಯ ಕಕ್ಕೇಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. "ಜೆಡಿಎಸ್ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕೆಂದು ಜೆಡಿಎಸ್ ನಾಯಕರು ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಸ್ವಲ್ಪ ದಿನದಲ್ಲಿಯೇ ನನ್ನ ಹೆಸರು ಘೋಷಣೆಯಾಗಲಿದೆ" ಎಂದರು.