ಹಾಸನ | ಸಕಲೇಶಪುರ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿಗೆ ದಸಂಸ ಕರೆ

  • ದಲಿತ ಸಂಘರ್ಷ ಸಮಿತಿ – ಕರ್ನಾಟಕ ವತಿಯಿಂದ ನಿರ್ಧಾರ
  • ಮನವಿ ಪತ್ರ ಸ್ವೀಕರಿಸಿ ಅಧಿಕಾರಿಗಳ ಮೂಲಕ ಸಿಎಂ, ಸಚಿವರಿಗೆ ರವಾನೆ

ಸಕಲೇಶಪುರ ತಾಲೂಕಿನ ಹಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಲೂಕು ಕಚೇರಿ ಮುಂಭಾಗ ಅರ್ಜಿ ಸ್ವೀಕರಿಸುವ ಮುಖಾಂತರ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ಕರ್ನಾಟಕ ಜಿಲ್ಲಾ ಸಂಚಾಲಕ ವಳಲಹಳ್ಳಿ ವೀರೇಶ್ ತಿಳಿಸಿದ್ದಾರೆ.

ಸಲ್ಲಿಕೆಯಾಗುವ ಮನವಿಗಳನ್ನು ಅಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿ ಮತ್ತು ಸಂಬಂಧಪಟ್ಟ ಮಂತ್ರಿಗಳಿಗೆ ಕಳುಹಿಸಿ ಸಮಸ್ಯೆಗಳನ್ನು ಬೇಗ ಬಗೆಹರಿಸುವಂತೆ ಮನವಿ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲೂಕಿನ ಎಲ್ಲ ರೈತರು ದಾಖಲಾತಿಗಳೊಂದಿಗೆ ಹಾಜರಾಗಬೇಕು. ಫಾರಂ-50 ಮತ್ತು ಫಾರಂ-53 ವಜಾ ಆಗಿದ್ದ ಕಾರಣ ಫಾರಂ-57ರಲ್ಲಿ ಅರ್ಜಿ ಸಲ್ಲಿಸಿ ವ್ಯವಸಾಯ ಮಾಡಿಕೊಂಡವರಿಗೆ ಮಂಜೂರು ಮಾಡಬೇಕು ಎಂದು ಮನವಿ ಮಾಡಿದ್ದಾರೆ. 

ದರಖಾಸು ಫಾರಂ-50 ಮತ್ತು ಫಾರಂ-53ರಲ್ಲಿ ಮಂಜೂರಾತಿ ಆದ ಅವರ ದುರಸ್ತು, ಹದ್ದುಬಸ್ತು ಮಂಜೂರು ಮಾಡಿಕೊಡಬೇಕು. 94-ಸಿ ಅರ್ಜಿ ಸಲ್ಲಿಸಿದವರಿಗೆ ಎಚ್ ಆರ್ ಪಿ, ಡೀಮ್ಡ್ ಫಾರೆಸ್ಟ್ ಜಾಗದಲ್ಲಿ ಮತ್ತು ಸಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಸಾಗುವಳಿ ಚೀಟಿ ವಿತರಣೆ ಆದಷ್ಟು ಬೇಗ ವಿಲೇವಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಕೆಲವು ಗ್ರಾಮಗಳಿಗೆ ಸ್ಮಶಾನ ಜಾಗ ಇದ್ದರೂ ಒತ್ತುವರಿಯಾಗಿದೆ. ಅದನ್ನು ತೆರವುಗೊಳಿಸಬೇಕು. 94 ಸಿ ಯಲ್ಲಿ ಮಂಜೂರಾತಿ ಆಗಿ ಸಾಗುವಳಿ ಪಡೆದಿದ್ದು, ಗ್ರಾಮ ಪಂಚಾಯಿತಿ ವತಿಯಿಂದ ಅರ್ಜಿ ಸಲ್ಲಿಸಿದವರ ಈ-ಸ್ವತ್ತು ತಕ್ಷಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಗ್ರಾಮ ಠಾಣ ಜಾಗ ಒತ್ತುವರಿಯನ್ನು ತೆರವುಗೊಳಿಸಿ ಅಲ್ಲಿ ನಿರ್ಗತಿಕರಿಗೆ ಮನೆ ನಿರ್ಮಿಸಲು ಅವಕಾಶ ಮಾಡಿಕೊಡಬೇಕು. ಪ್ರತಿ ಗ್ರಾಮದಲ್ಲೂ ಎಲ್ಲ ಜಾತಿ ಬಡವರಿಗೆ ನಿವೇಶನ ರಹಿತರಿಗೆ ಸರ್ಕಾರಿ ಜಾಗದಲ್ಲಿ 3 ಎಕರೆ ನಿಗದಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪಿಎಫ್‌ಐ ಜಿಲ್ಲಾಧ್ಯಕ್ಷ ಬಂಧನ ಖಂಡಿಸಿ ಪ್ರತಿಭಟನೆ

ಕೆಲವು ಗ್ರಾಮಗಳಿಗೆ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ, ಎಸ್ ಇಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಕಾಂಕ್ರಿಟ್ ರಸ್ತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ತ್ವರಿತವಾಗಿ ಮಾಡಬೇಕು. ಕೆಲವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅನಿರ್ದಿಷ್ಟಾವಧಿ ಧರಣಿ ಆರಂಭಿಸುವ ದಿನಾಂಕ ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ವಳಲಹಳ್ಳಿ ವೀರೇಶ್ ತಿಳಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್