ಹಾಸನ | ವಿಚ್ಛೇದನ ಪ್ರಕರಣ: ಕೋರ್ಟ್‌ ಆವರಣದಲ್ಲೇ ಪತ್ನಿಯನ್ನು ಹತ್ಯೆಗೈದ ವಿಕೃತ ಪತಿ

Hasana
  • ಆರು ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿಗಳು
  • ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

ವಿಕೃತ ಪತಿಯೊಬ್ಬ ವಿಚ್ಛೇದನ ಪ್ರಕರಣದ ವಿಚಾರಣೆಗೆ ಬಂದ ಪತ್ನಿಯ ಮೇಲೆ ನ್ಯಾಯಾಲಯದ ಆವರಣದಲ್ಲೇ ಚಾಕುವಿನಿಂದ ಹಲ್ಲೆ ಮಾಡಿ, ಹತ್ಯೆಗೈದಿರುವ ದುರ್ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. 

ಜಿಲ್ಲೆಯ ತಟ್ಟೆಗೆರೆ ಗ್ರಾಮದ ಶಿವಕುಮಾರ್‍‌ ಮತ್ತು ನುಗ್ಗೆಹಳ್ಳಿಯ ಚೈತ್ರ ಎಂಬುವವರು ಆರು ವರ್ಷದ ಹಿಂದೆ ಮದುವೆಯಾಗಿದ್ದರು. ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಳೆದ ಮೂರು ವರ್ಷದಿಂದ ದಂಪತಿಗಳ ನಡುವೆ ಕಲಹ ಉಂಟಾಗಿತ್ತು. ಕಲಹವು ವಿಚ್ಛೇದನ ಪಡೆಯುವ ಹಂತಕ್ಕೆ ತಲುಪಿ, ದಂಪತಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಶನಿವಾರ ನ್ಯಾಯಾಲಯದಲ್ಲಿ ವಿಚ್ಛೇದನದ ವಿಚಾರಣೆ ಇದ್ದುದ್ದರಿಂದ ಚೈತ್ರ ತನ್ನ ಎರಡು ಹೆಣ್ಣು ಮಕ್ಕಳೊಂದಿಗೆ ನ್ಯಾಯಾಲಯಕ್ಕೆ ಬಂದಿದ್ದರು.

ಈ ಸುದ್ದಿ ಓದಿದ್ದೀರಾ?: ಬಾಗಲಕೋಟೆ | ಕೌಟುಂಬಿಕ ಕಲಹ: ಮಹಿಳೆಯ ಸಹೋದರನಿಂದ ಯೋಧನ ಬರ್ಬರ ಹತ್ಯೆ

ವಿಚಾರಣೆಗೆ ಮುನ್ನವೇ ಚೈತ್ರ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಶಿವಕುಮಾರ್, ಆಕೆಯ ಕತ್ತು ಕೊಯ್ದಿದ್ದಾನೆ. ಘಟನೆಯ ನೋಡಿ ಭಯಭೀತರಾದ ಮಕ್ಕಳು ಚೀರಿಕೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಚೈತ್ರ ಸಾವನ್ನಪ್ಪಿದ್ದಾರೆ.

ತಪ್ಪಿಸಿಕೊಂಡು ಓಡಿಹೋಗಲು ಯತ್ನಿಸಿದ ಶಿವಕುಮಾರ್‌ನನ್ನು ಹಿಡಿದ ಸ್ಥಳೀಯರು, ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್