ರಾಜ್ಯಾದ್ಯಂತ ಭಾರಿ ಮಳೆ: ಕಲಬುರಗಿಯಲ್ಲಿ ಸಿಡಿಲು ಬಡಿದು ಯುವತಿ ಸಾವು

Rain
  • ಮಲಾಪುರ ತಾಲೂಕಿನ ಮಳಸಾಪುರ ಗ್ರಾಮದಲ್ಲಿ ನಡೆದ ಘಟನೆ
  • ಆಳಂದ ತಾಲೂಕಿನ ತೀರ್ಥ ಗ್ರಾಮದಲ್ಲಿ ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ

ಶನಿವಾರದಿಂದ ರಾಜ್ಯಾದ್ಯಂತ ನಾನಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅಪಾರ ಹಾನಿ ಸಂಭವಿಸುತ್ತಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಳಸಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ.

ಶೈಲಜಾ ಶರಣಪ್ಪ ಜಮಾದರ (17) ಮೃತ ಯುವತಿ. ಪಿಯುಸಿ ಓದುತ್ತಿದ್ದ ಶೈಲಜಾ, ಭಾನುವಾರ ಕಾಲೇಜು ರಜೆ ಇದ್ದ ಕಾರಣ ತಂದೆ ಜೊತೆ ಹೊಲದಲ್ಲಿ ಕೆಲಸ ಮಾಡಲು ತೆರಳಿದ್ದರು. ಸಂಜೆ ವೇಳೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲು ಆರಂಭವಾಗಿದ್ದು, ಆಶ್ರಯಕ್ಕಾಗಿ ಮರದ ಕೆಳಗೆ ನಿಂತಿದ್ದಾರೆ. ಆ ಸಮಯದಲ್ಲಿ ಸಿಡಿಲು ಬಡಿದು ಸ್ಥಳದಲ್ಲಿಯೇ ಯುವತಿ ಸಾವನ್ನಪ್ಪಿದ್ದಾರೆ. ತಂದೆ ಶರಣಪ್ಪಗೆ ಗಾಯಗಳಾಗಿವೆ. 

ಆಳಂದ ತಾಲೂಕಿನ ತೀರ್ಥ ಗ್ರಾಮದಲ್ಲಿ ಮಳೆಯ ರಭಸಕ್ಕೆ ಶ್ರೀದೇವಿ ನಿಂಗಣ್ಣಾ ಪೂಜಾರಿ ಎಂಬ ರೈತ ಮಹಿಳೆ ಹಳ್ಳದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. 

ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಎತ್ತುಗಳ ಜೊತೆಗೆ ಮನೆಗೆ ತೆರಳುತ್ತಿದ್ದರು. ಈ ವೇಳೆ, ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟಲು ಮುಂದಾಗಿದ್ದಾರೆ. ನೀರಿನ ರಭಸದಲ್ಲಿ ಕೊಚ್ಚಿಹೋಗಿದ್ದಾರೆ. ರಾತ್ರಿ ಇಡೀ ಕುಟುಂಬದ ಸದಸ್ಯರು ಮಹಿಳೆಗಾಗಿ ಹುಡುಕಾಟ ನಡೆಸಿದ್ದು, ಭಾನುವಾರ ಬೆಳಿಗ್ಗೆ ಹೆಬಳ್ಳಿ ಸಮೀಪದ ಹಳ್ಳದಲ್ಲಿ ಶವ ಪತ್ತೆಯಾಗಿದೆ.

AV Eye Hospital ad

ಈ ಸುದ್ದಿ ಓದಿದ್ದೀರಾ?; ಅಲ್ಪಸಂಖ್ಯಾತರು ಎರಡನೇ ದರ್ಜೆಯವರೆಂದು ಹತ್ತಿಕ್ಕಲು ಯತ್ನಿಸಿದರೆ ದೇಶ ವಿಭಜನೆ: ರಘುರಾಮ್ ರಾಜನ್ ಎಚ್ಚರಿಕೆ

ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನದಲ್ಲಿ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಗಸ್ಟ್‌ 1 ಮತ್ತು 2 ರಂದು ಭಾರಿ ಮಳೆಯಾಗುವ ಸಂಭವಿದೆ. ಈ ಎಲ್ಲ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕರ್ನಾಟಕದ ಯಾದಗಿರಿ, ವಿಜಯಪುರ, ರಾಯಚೂರು, ಗದಗ, ಕೊಪ್ಪಳ, ಧಾರವಾಡ, ಹಾಗೂ ದಕ್ಷಿಣ ಕರ್ನಾಟಕ ಭಾಗದ ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಅಗಸ್ಟ್‌ 2 ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app