ಅತಿವೃಷ್ಟಿ ಅನಾಹುತ | ತುರ್ತು ಮೂಲಸೌಕರ್ಯಕ್ಕೆ 500 ಕೋಟಿ ರೂ. ಬಿಡುಗಡೆ: ಬೊಮ್ಮಾಯಿ

  •  500 ಕೋಟಿ ರೂ ಹಣ ಬಿಡುಗಡೆ ಆದೇಶ
  • ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ

ಮಳೆ ಮತ್ತು ಪ್ರವಾಹ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ವೀಡಿಯೊ ಕಾನ್ಫರೆನ್ಸ್ ನಡೆಸಿದರು.

ದೇವನಹಳ್ಳಿಯಲ್ಲಿ ನಡೆಯುತ್ತಿರುವ ಬಿಜೆಪಿ ಚಿಂತನ ಮಂಥನ ಸಭೆಯ ಬಿಡುವಿನ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ, ಜಿಲ್ಲಾಧಿಕಾರಿಗಳೊಂದಿಗೆ ಈ ಸಂವಾದ ನಡೆಸಿದರು.

ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತ ಮಳೆ ಸುರಿಯುತ್ತಿದೆ. ಇದರಿಂದ ಹಲವಾರು ಜಿಲ್ಲೆಗಳಲ್ಲಿ ಸಮಸ್ಯೆಯಾಗಿದೆ. ಮೂಲಸೌಕರ್ಯಗಳಾದ ರಸ್ತೆ, ಸೇತುವೆ, ಶಾಲೆ, ಅಂಗವಾಡಿ, ವಿದ್ಯುತ್ ಮಾರ್ಗ, ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಗಳು ಹಾನಿಗೆ ಒಳಗಾಗಿವೆ ಎಂದು ಮುಖ್ಯಮಂತ್ರಿಗಳು ಸಂವಾದದ ಬಳಿಕೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಸಿದ್ದಿ ಓದಿದ್ದೀರಾ?: ಮಳೆ ಹಾನಿ| ಸಂಕಷ್ಟ ಕಾಲದಲ್ಲಿ ಜನರೊಂದಿಗೆ ಸರ್ಕಾರವಿದೆ: ಮುಖ್ಯಮಂತ್ರಿ ಬೊಮ್ಮಾಯಿ ಅಭಯ

AV Eye Hospital ad

ಈ ಹಾನಿಯನ್ನು ಜಿಲ್ಲಾಧಿಕಾರಿಗಳು ವರದಿ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ನಾನು ಕೆಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೆ. ಆ ಸಂದರ್ಭದಲ್ಲಿ ಈ ಹಾನಿಯನ್ನು ನಾನು ಸ್ವತಃ ವೀಕ್ಷಣೆ ಮಾಡಿದ್ದೇನೆ ಎಂದು ಸಿಎಂ ಉಲ್ಲೇಖಿಸಿದರು. 

ತ್ವರಿತಗತಿಯಲ್ಲಿ ಮೂಲಸೌಕರ್ಯಗಳನ್ನು ಯಥಾಸ್ಥಿತಿಗೆ ತರಬೇಕಾಗಿದೆ. ಇದಕ್ಕಾಗಿ ಹಲವಾರು ಕಾಮಗಾರಿ ಕೈಗೊಳ್ಳಬೇಕಾಗಿದೆ. ಇದಕ್ಕಾಗಿ ಕೂಡಲೇ 500 ಕೋಟಿ ಹಣ ಬಿಡುಗಡೆ ಮಾಡಲು ಆದೇಶ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app