ರಾಜ್ಯಾದ್ಯಂತ ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ಥ

  • ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ
  • ಬೆಂಗಳೂರಲ್ಲಿ 3 ದಿನ, ಇತರೆಡೆ 5 ದಿನ ಯೆಲ್ಲೋ ಅಲರ್ಟ್

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು ಪ್ರದೇಶದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಅಬ್ಬರ ಇನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ತುಸು ಕಡಿಮೆಯಿದ್ದು, ಕರಾವಳಿ ಭಾಗದ ಜಿಲ್ಲೆಗಳಿಗೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ಇಂದಿನಿಂದ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಿಗೂ 5 ದಿನ ಯಲ್ಲೋ ಅಲರ್ಟ್ ಇರಲಿದ್ದು, ಬೆಂಗಳೂರಿನಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಸೆಪ್ಟೆಂಬರ್ 9ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜನಸಾಮಾನ್ಯರಲ್ಲಿ ಮತಷ್ಟು ಆತಂಕ ಹೆಚ್ಚಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದ ಭಾಗದಲ್ಲಿ ಗಾಳಿಯ ವೇಗ ಹೆಚ್ಚಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. 

ಬೆಂಗಳೂರು, ಕರಾವಳಿ, ಮಲೆನಾಡು, ಕೊಡಗು ಭಾಗಗಳಲ್ಲಿ ಮುಂದಿನ ಐದು ದಿನಗಳವರೆಗೆ ಧಾರಾಕಾರವಾಗಿ ಮಳೆಯಾಗಲಿದ್ದು, ಜನಜೀವನ ಸಂಪೂರ್ಣ ಹದಗೆಡುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇಲ್ಲಿಗಿಂತಲೂ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? : ಬೆಂಗಳೂರು| ಮಳೆಯ ಕಾರಣ ಐಟಿ ಕಂಪನಿಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಚಿಕ್ಕಬಳ್ಳಾಪುರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ಚಾಮರಾಜನಗರ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯ ಬಹುತೇಕ ಕಡೆಗಳಲ್ಲಿ ಗುಡುಗು–ಸಿಡಿಲು ಸಹಿತ ಧಾರಾಕಾರ ಮಳೆ ಸುರಿದು ಕಾಲುವೆಗಳು ತುಂಬಿ ರಸ್ತೆಗಳ ಮೇಲೆಯೇ ಹೊಳೆಯಂತೆ ಹರಿಯ ತೊಡಗಿದೆ. ತಗ್ಗು ಪ್ರದೇಶದಲ್ಲಿರುವ ಹಲವು ಮನೆಗಳಿಗೆ ನೀರು ನುಗ್ಗಿದೆ.

ನಿಮಗೆ ಏನು ಅನ್ನಿಸ್ತು?
1 ವೋಟ್
Image
av 930X180