ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವೆಬ್‌ಸೈಟಿನಲ್ಲಿ ‘ಹಿಂದಿ ಪ್ರಚಾರ’: ಬಿಜೆಪಿಯಿಂದ ಮತ್ತೆ ಮತ್ತೆ ಕನ್ನಡಕ್ಕೆ ಅಪಮಾನ

Hindi
  • ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳಿಂದ ಮತ್ತೆ ಮತ್ತೆ ಕನ್ನಡಕ್ಕೆ ಅಪಮಾನ
  • ದೇಶದಾದ್ಯಂತ ‘ಆಜಾದಿ ಕಾ ಅಮೃತ ಮಹೋತ್ಸವ’ ಹೆಸರಿನಲ್ಲಿ ಹಿಂದಿ ಹೇರಿಕೆ

ದೇಶವೆಲ್ಲ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಕೇಂದ್ರ ಸರ್ಕಾರ ಕೂಡಾ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ತಯಾರಾಗಿದೆ. ಆದರೆ, ಇದೇ ನೆಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವೆಬ್‌ಸೈಟಿನಲ್ಲಿ ಹಿಂದಿ ಪ್ರಚಾರ ನಡೆಸಲಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ.

ಈಗಾಗಲೇ ದೇಶದಾದ್ಯಂತ ‘ಆಜಾದಿ ಕಾ ಅಮೃತ ಮಹೋತ್ಸವ’ ಮತ್ತು ‘ಹರ್ ಘರ್ ತಿರಂಗಾ’ ಕ್ಯಾಂಪೇನ್ ಹೆಸರಿನಲ್ಲಿ ಹಿಂದಿ ಹೇರಿಕೆ ಮಾಡಿರುವ ಕೇಂದ್ರ ಸರ್ಕಾರ, ಇದೀಗ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವೆಬ್‌ಸೈಟಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಬಗ್ಗೆ ಹಿಂದಿ ಪೋಸ್ಟರ್ ಬಳಸಿ ಪ್ರಚಾರ ಮಾಡುತ್ತಿದೆ.

ಈ ಸುದ್ದಿ ಓದಿದ್ದೀರಾ?: ಅಮಿತ್ ಶಾ ಕಾರ್ಯಕ್ರಮದಲ್ಲಿ ಮತ್ತೆ ಕನ್ನಡ ಕಡೆಗಣನೆ| ಬೊಮ್ಮಾಯಿ ಮೌನಕ್ಕೆ ಕನ್ನಡಿಗರ ಆಕ್ರೋಶ

ಅಮಿತ್ ಶಾ ಕಾರ್ಯಕ್ರಮದಲ್ಲೂ ಕನ್ನಡ ಕಡೆಗಣನೆ

ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವು ಬಿಜೆಪಿ ಸರ್ಕಾರಗಳು ಉದ್ದೇಶಪೂರ್ವಕವಾಗಿ ಕನ್ನಡವನ್ನು ಕಡೆಗಣಿಸಿ, ಹಿಂದಿಯನ್ನು ಮುನ್ನೆಲೆಗೆ ತರುತ್ತಿವೆಯಾ ಎಂಬ ಅನುಮಾನ ಬಲವಾಗುತ್ತಿದೆ.

ಗುರುವಾರ (ಆ.05) ದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೂಡ ಕನ್ನಡದ ಬದಲಿಗೆ ಹಿಂದಿ ಬಾಷೆಯನ್ನು ಬಳಸಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಕೇಂದ್ರ ಸಂಸ್ಕೃತಿ ಸಚಿವಾಲಯ ಬೆಂಗಳೂರಿನಲ್ಲಿ ಆಯೋಜಿಸಿದ್ದ "ಸಂಕಲ್ಪದಿಂದ ಸಿದ್ಧಿ" ಕಾರ್ಯಕ್ರಮದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿನಿಧಿಗಳು ಭಾಗವಹಿಸಿದ್ದರು. ಕರ್ನಾಟಕದಲ್ಲೇ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಬಳಸದಿರುವುದಕ್ಕೆ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಸಚಿವರು ಭಾಗವಹಿಸುವ, ಅದರಲ್ಲೂ ಅಮಿತ್ ಶಾ ಪಾಲ್ಗೊಳ್ಳುವ ಕಾರ್ಯಕ್ರಮಗಳಲ್ಲೇ ಮತ್ತೆ ಮತ್ತೆ ಕನ್ನಡಕ್ಕೆ ಅಪಮಾನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಇದೀಗ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹೆಸರಿನಲ್ಲಿ ಹಿಂದಿ ಹೇರಿಕೆ ಮಾಡುತ್ತಿರುವುದಲ್ಲದೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವೆಬ್‌ಸೈಟಿನಲ್ಲೂ ಹಿಂದಿ ಪ್ರಚಾರ ಮಾಡಲಾಗುತ್ತಿದೆ.

ನಿಮಗೆ ಏನು ಅನ್ನಿಸ್ತು?
3 ವೋಟ್