
ತಮ್ಮ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಗದಗ ಜಿಲ್ಲೆಯ ರೋಣ ತಾಲೂಕಿನ ಹೊಸಳ್ಳಿ ಗ್ರಾಮದ ವಿದ್ಯಾರ್ಥಿಗಳು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮದ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ಖಾಸಗಿ ಬಸ್ಗಳನ್ನು ಅವಲಂಬಿಸಿದ್ದಾರೆ. ಆ ಬಸ್ಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ. ಇದರಿಂದಾಗಿ ಶಾಲಾ ಸಮಯಕ್ಕೆ ಅನುಗುಣವಾಗಿ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೋಣ ಹಾಗೂ ಗಜೇಂದ್ರಗಡ ಮಧ್ಯೆ ನೂರಾರು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.