ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಯೋಧ ಮೃತ್ಯು

Kadaba Sainika Gangadhar

75ನೇ ಸ್ವಾತಂತ್ರೋತ್ಸವದ ಧ್ವಜಾರೋಹಣದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ನಿವೃತ್ತ ಸೈನಿಕರೋರ್ವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಸೋಮವಾರ ಕಡಬದಲ್ಲಿ ನಡೆದಿದೆ.

ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ, ಧ್ವಜಾರೋಹಣಕ್ಕೆ ಸಿದ್ಧವಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಗಂಗಾಧರ ಗೌಡ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಿಡಿಯೋ ಕೃಪೆ: SANMARGA NEWS

ನಿಮಗೆ ಏನು ಅನ್ನಿಸ್ತು?
0 ವೋಟ್