
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಕಿಡಿಗಳು ಧ್ವಂಸಗೊಳಿಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಗಳು ಒತ್ತಾಯಿಸಿವೆ.
ಮಂಗಳವಾರ ರಾತ್ರಿ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿ, ಕಿಡಿಗೇಡಿಗಳು ಪಾರಾರಿಯಾಗಿದ್ದಾರೆ. ಬುಧವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.
ಪ್ರತಿಮೆಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಮತ್ತು ಅವರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಭೀಮ ಸೇನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ, ಪ್ರತಿಭಟಿಸಿದ್ದಾರೆ.
ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಅಫಜಲಪುರ ತಹಶೀಲ್ದಾರ್ ಸಂಜೀವ್ ಕುಮಾರ್ ಮತ್ತು ಪೋಲಿಸ್ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡಬಸವರಾಜ್ ಎಸ್ ಬಿಲ್ಕರ, ಅಶೋಕ ಸಿಂಗೆ, ನಾಗೇಶ ಕಾಂಬಳೆ, ರಾಜು ಅರೆಕೆರಾ, ಸಿದ್ದು ಚೌಕಿಮಠ, ಶಿವಶರಣ ದೋಡ್ಡಮನಿ, ಶ್ರವಣ ಕುಮಾರ, ಮಾಹಾತೇಶ ಬಳೂಡಗಿ, ರವಿ ಸಿಂಗೆ ಸೇರಿದಂತೆ ಹಲವರು ಇದ್ದರು.