ಕೋಲಾರ | ಸರ್ಕಾರದ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಿ: ತಹಶೀಲ್ದಾರ್ ಶರೀನಾತಾಜ್ ಕರೆ

  • ಶ್ರೀನಿವಾಸಪುರ ತಾಲೂಕಿನಲ್ಲಿ 'ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮ'
  • ಶೇ. 20ರಷ್ಟು ರೈತರ ಬೆಳೆ ಸಮೀಕ್ಷೆ ಕಾರ್ಯ ಮುಗಿದಿದ್ದು, ಶೇ.80ರಷ್ಟು ಬೆಳೆ ಸಮೀಕ್ಷೆ ಬಾಕಿ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಸರ್ಕಾರದ ಆದೇಶ ಮೇರೆಗೆ 'ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮ'ವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸರ್ಕಾರದ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಶರೀನಾತಾಜ್ ಹೇಳಿದರು.

ತಾಲೂಕಿನ ರಾಯಲಾಡು ಹೋಬಳಿಯ ಚಿಲ್ಲಾರಪಲ್ಲಿ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಕಾರ್ಯಕ್ರಮದ ಅಡಿಯಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 

“ಗ್ರಾಮದ ಸಮಸ್ಯೆ ಇದ್ದಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ದಾಖಲಿಸಲು ಇಲಾಖೆ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದರು.

ರಸ್ತೆ ಸಮಸ್ಯೆ, ಗ್ರಾಮಕ್ಕೊಂದು ಗ್ರಂಥಾಲಯಬೇಕೆಂಬ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದು ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದರು. ಮತದಾರರ ಗುರುತಿನ ಚೀಟಿಗೆ ಆಧಾರ ಲಿಂಕ್ ಮಾಡುವ ಪ್ರಕ್ರಿಯೆಯು ಚಾಲನೆಯಲ್ಲಿದ್ದು, ಶೇ.40ರಷ್ಟು ಕಾರ್ಯ ಮುಗಿದಿದೆ. ಉಳಿದ ಶೇ.60% ಫಲಾನುಭವಿಗಳು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಲಿಂಕ್ ಮಾಡಿಸಬೇಕು ತಹಶೀಲ್ದಾರ್ ತಿಳಿಸಿದರು.

“ಶೇ. 20ರಷ್ಟು ರೈತರ ಬೆಳೆ ಸಮೀಕ್ಷೆ ಕಾರ್ಯ ಮುಗಿದಿದ್ದು, ಉಳಿದ ಶೇ.80ರಷ್ಟು ಬೆಳೆ ಸಮೀಕ್ಷೆ ಬಾಕಿ ಇದೆ. ರೈತರು ಸಂಬಂದಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಬೇಕು. 17 ರೀತಿಯ ಹಲವು ಪಿಂಚಣಿ ಸೌಲಭ್ಯಗಳಿದ್ದು, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪೌತಿ ಖಾತೆದಾರರು ಮರಣ ಪ್ರಮಾಣ ಪತ್ರ ಮತ್ತು ವಂಶವೃಕ್ಷ ಇತರೆ ದಾಖಲೆಗಳನ್ನು ನೀಡಿದರೆ ದಾಖಲೆಗಳನ್ನು ಪರಿಶೀಲಿಸಿ 45 ದಿನಗಳಲ್ಲಿ, ಅರ್ಹ ಫಲಾನುಭವಿಗಳಿಗೆ ಪೌತಿ ಖಾತೆ ದಾಖಲೆ ನೀಡಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ದಲಿತರಿಗೆ ಮೀಸಲಿಟ್ಟ ಅನುದಾನವನ್ನು ವೇದಗಣಿತಕ್ಕೆ ದುರ್ಬಳಕೆ ಮಾಡಿಕೊಳ್ಳುವ ಹುನ್ನಾರ: ಅಶ್ವಿನಿ ಮದನಕರ

ಬಿಇಒ ವಿ. ಉಮಾದೇವಿ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಶ್ರೀನಿವಾಸನ್, ಪಿಡಬ್ಲ್ಯೂಡಿ ಹಿರಿಯ ಅಭಯಂತರ ಎಂ.ಕೆ.ಹಸೇನ್ ಸಾಬ್, ಕಿರಿಯ ಅಭಯಂತರ ಗೋವಿಂದಪ್ಪ, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷೆ ನಿರ್ಮಲಮ್ಮ ಇತರರು ಇದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180