ಕೋಲಾರ | ಖಾಸಗಿ ಬಸ್ ಪಲ್ಟಿ; ಇಬ್ಬರ ದುರ್ಮರಣ

Kolar
  • ಮುಳುಬಾಗಿಲು ತಾಲೂಕಿನ ವಿರುಪಾಕ್ಷಿ ಗೇಟ್ ಬಳಿ ಘಟನೆ
  • ಆಂಧ್ರಪ್ರದೇಶ ಮೂಲದ ವೇಮುಲಾ-ಕಾವೇರಿ ಟ್ರಾವೇಲ್‌ಗೆ ಸೇರಿದ ಬಸ್‌

ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ವಿರುಪಾಕ್ಷಿ ಗೇಟ್ ಬಳಿ ಬುಧವಾರ ಮುಂಜಾನೆ ಸುಮಾರು ಐದು ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಬಸ್‌ನಲ್ಲಿದ್ದ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ. 

ಮೃತರನ್ನು ಆಂಧ್ರಪ್ರದೇಶದ ವಿಜಯವಾಡ ಮೂಲದ ಷರೀಫ್ ಹಾಗೂ ಮೈಮುನ್ನಿಸಾ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?; ವಿಜಯನಗರ | ಕ್ಯಾಸನಕೆರೆಯಲ್ಲಿ ಹತ್ತು ಜನಕ್ಕೆ ವಾಂತಿ ಭೇದಿ, ಬಾಲಕಿ ಸಾವು; ಜಿಲ್ಲಾಧಿಕಾರಿ ಭೇಟಿ

"ವೇಮುಲಾ - ಕಾವೇರಿ ಟ್ರಾವೇಲ್‌ಗೆ ಸೇರಿದ ಖಾಸಗಿ ಬಸ್‌ ಆಂಧ್ರಪ್ರದೇಶ ಗುಂಟೂರಿನಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವೇಳೆ, ಮುಳಬಾಗಿಲು ಬಳಿ ಅಪಘಾತ ಸಂಭವಿಸಿದೆ. ಬಸ್‌ 30 ಪ್ರಯಾಣಿಕರು ಇದ್ದರು" ಎಂದು ತಿಳಿದು ಬಂದಿದೆ.

ಚಾಲಕ ಬಸ್‌ ಅನ್ನು ಅತಿಯಾದ ವೇಗದಿಂದ ಚಲಾಯಿಸಿಕೊಂಡು ಬರುತ್ತಿದ್ದರಿಂದಲೇ ದುರ್ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ. ಅಪಘಾತದ ಸ್ಥಳಕ್ಕೆ ಮುಳುಬಾಗಿಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಲಕ ಮತ್ತು ನಿರ್ವಾಹಕನ ವಿರುದ್ಧ ಮುಳುಬಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್