ಕೊಪ್ಪಳ | ಡಿ ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

Koppal | Applications invited for D. Devaraj Urs Pratibha Puraskar
  • ಫೆಬ್ರವರಿ 8ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  
  • ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಲು ಸಲಹೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2022ನೇ ಸಾಲಿನ ಪದವಿ/ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ/ ವೃತ್ತಿಪರ ಸ್ನಾತ್ತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದು, ಸರಾಸರಿ ಶೇ.70ರಷ್ಟು ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಸುದ್ದಿ ಓದಿದ್ದೀರಾ? ಕೋಲಾರ | ಎಲ್ಲ ಸಮುದಾಯ ಒಗ್ಗೂಡಿದರೆ ಮಾತ್ರ ಅಸ್ಪೃಶ್ಯತೆ ನಿವಾರಣೆ: ಅಂಜಲಿದೇವಿ

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 8ರ ಸಂಜೆ 5 ಗಂಟೆವರೆಗೆ ಅವಕಾಶವಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖೆ ವೆಬ್‌ಸೈಟ್ https://bcwd.karnataka.gov.in ನೋಡಬಹುದು. ಅಥವಾ ಸಹಾಯವಾಣಿ ಸಂಖ್ಯೆ 8050770004ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲಾ ಸಂಯೋಜಕ ಭೀಮಾಶಂಕರ್ ಮಾಹಿತಿ ಆಧರಿಸಿದ ವರದಿ
ನಿಮಗೆ ಏನು ಅನ್ನಿಸ್ತು?
0 ವೋಟ್
eedina app