ಮಂಗಳೂರು ಸ್ಫೋಟ | ಕಾಂಗ್ರೆಸ್‌ ಸಮಾಜ ವಿರೋಧಿ ಚಟುವಟಿಕೆಯನ್ನು ಸಹಿಸುವುದಿಲ್ಲ: ಡಿ ಕೆ ಶಿವಕುಮಾರ್‌

D K shivakumar
  • ಮಂಗಳೂರಿನ ಕಂಕನಾಡಿಯಲ್ಲಿ ಸಂಭವಿಸಿದ ಸ್ಫೋಟ ಘಟನೆ ಖಂಡಿಸಿದ ಡಿಕೆಶಿ
  • ಘಟನೆಯ ಹಿಂದೆ ಯಾರೇ ಅಡಗಿದ್ದರೂ ಕೂಡಲೆ ಅವರನ್ನು ಬಂಧಿಸಿ: ಆಗ್ರಹ

ಮಂಗಳೂರಿನ ಕಂಕನಾಡಿಯಲ್ಲಿ ಸಂಭವಿಸಿದ ಆಟೋ ರಿಕ್ಷಾದಲ್ಲಿನ ಸ್ಫೋಟ ಘಟನೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಖಂಡಿಸಿ ಟ್ವೀಟ್‌ ಮಾಡಿದ್ದಾರೆ.

“ಘಟನೆಯ ಹಿಂದೆ ಯಾರೇ ಅಡಗಿದ್ದರೂ ಕೂಡಲೆ ಅವರನ್ನು ಬಂಧಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್‌ ಪಕ್ಷವು ಯಾವುದೇ ಕಾರಣಕ್ಕೂ ಇಂತಹ ಸಮಾಜ ವಿರೋಧಿ ಚಟುವಟಿಕೆಗಳನ್ನು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

“ಮಂಗಳೂರಿನ ಕಂಕನಾಡಿಯಲ್ಲಿ ಸಂಭವಿಸಿದ ಆಟೋ ರಿಕ್ಷಾದಲ್ಲಿನ ಸ್ಫೋಟ ಆಕಸ್ಮಿಕವಲ್ಲ, ಅದೊಂದು ಭಯೋತ್ಪಾದಕ ಕೃತ್ಯ ಎಂದು ಕರ್ನಾಟಕ ಪೊಲೀಸ್‌ ಮಹಾ ನಿರ್ದೇಶಕ (ಡಿಜಿಪಿ) ಪ್ರವೀಣ್‌ ಸೂದ್‌ ಹೇಳಿದ್ದಾರೆ. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ, ತಕ್ಕ ಶಿಕ್ಷೆಯಾಗಲಿ” ಎಂದು ಒತ್ತಾಯಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app