ಮಂಗಳೂರು | ಖಾಸಗಿ ಕಾಲೇಜಿನ ಮುಖ್ಯಸ್ಥ ನಾಪತ್ತೆ; ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

  • ದ್ವಿಚಕ್ರ ವಾಹನದಲ್ಲಿ ಮನೆಯಿಂದ ಹೊರಟಿದ್ದ ಡೀನ್ ಡಿಸೋಜಾ
  • ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ

ಮಂಗಳೂರಿನ ಖಾಸಗಿ ಕಾಲೇಜಿನ ಮುಖ್ಯಸ್ಥ ಡಾ. ಅರ್ಬನ್ ಜೆಎ ಡಿಸೋಜಾ ಅವರು ಭಾನುವಾರ 
ವೆಲೆನ್ಸಿಯಾದಲ್ಲಿರುವ ಅವರ ಮನೆಯಿಂದ ಹೊರಟ ನಂತರ ಕಾಣೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿರುವ ಬಗ್ಗೆ ವರದಿಯಾಗಿದೆ.

ನಾಪತ್ತೆಯಾಗಿರುವ ಡಿಸೋಜಾ ಅವರು ತಮ್ಮ ಪತ್ನಿಗೆ ಹೊರಗೆ ಹೋಗಿ ಬರುವುದಾಗಿ ಹೇಳಿ, ನಂತರ ರಾತ್ರಿ ಏಳು ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಮನೆಯಿಂದ ಹೊರಟು ಸಮೀಪದ ಅಂಗಡಿಗೆ ಹೋಗಿದ್ದಾರೆ. ರಾತ್ರಿಯಾದರೂ ಹಿಂತಿರುಗದ ಕಾರಣ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. 

ಡಿಸೋಜಾ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳ್ಳಾಲ ಬೀಚ್ ಬಳಿ ಅವರ ಮೊಬೈಲ್ ಫೋನ್ ಸಿಗ್ನಲ್ ಸ್ವಲ್ಪ ಸಮಯದವರೆಗೆ ಪತ್ತೆಯಾಗಿದ್ದು, ಅನಂತರ ಯಾವುದೇ ಮಾಹಿತಿ ಸಿಕ್ಕಿರುವುದಿಲ್ಲ. ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಹುಡುಕಾಡಿದರೂ, ಡಿಸೋಜಾ ಅವರು ಪತ್ತೆಯಾಗಿಲ್ಲ. 

ಈ ಸುದ್ದಿ ಓದಿದ್ದೀರಾ? ಪ್ರವಾದಿ ಮುಹಮ್ಮದ್ ಬಗ್ಗೆ ಪ್ರಬಂಧ ಸ್ಪರ್ಧೆ; ಮುಖ್ಯ ಶಿಕ್ಷಕನ ಮೇಲೆ ಶ್ರೀರಾಮಸೇನೆ ದಾಳಿ

ಡಿಸೋಜಾ ಅವರನ್ನು ಪತ್ತೆಮಾಡಲು ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದು, ಈ ಬಗ್ಗೆ ಮಂಗಳೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. 

ವಿದ್ಯಾರ್ಥಿನಿ ಆತ್ಮಹತ್ಯೆ

ಶಿಕ್ಷಕನ ಆತ್ಮಹತ್ಯೆಯ ಪ್ರಕರಣದ ನಡುವೆಯೇ ಮಂಗಳೂರಿನ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. ಸಮಾಜಕಾರ್ಯ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿಯೊಬ್ಬಳು ಭಾನುವಾರ ಸಂಜೆ ಮಂಗಳೂರಿನ ಹೋಟೆಲ್ ಒಂದರಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಕಾಸರಗೋಡು ನಿವಾಸಿಯಾದ ಅಮೃತಾ (24) ಎಂಬವರು ಮೃತಪಟ್ಟಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತ ವಿದ್ಯಾರ್ಥಿನಿ ಮದುವೆಯಾಗಿದ್ದು, ಆಕೆಯ ಪತಿ ವಿದೇಶದಲ್ಲಿದ್ದಾರೆ. ವಿದ್ಯಾರ್ಥಿನಿಯು ತಾನು ಖಿನ್ನತೆಗೆ ಒಳಗಾಗಿದ್ದೀನಿ ಎಂದು ಡೆತ್‌ನೋಟ್ ಬರೆದಿಟ್ಟಿದ್ದಾಳೆ. ವಿಧಿ ವಿಧಾನಗಳನ್ನು ಪೂರ್ಣಗೊಳಿಸಿದ ನಂತರ, ಮೃತ ದೇಹವನ್ನು ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್